ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡ ಪ್ರಕಟ, ನಾಯಕನಾಗಿ ರೋಹಿತ್ ಶರ್ಮ
ಶಿವಮೊಗ್ಗ | 27 ಜನವರಿ 2022 | ಡಿಜಿ ಮಲೆನಾಡು.ಕಾಂ
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಭಾರತ ತಂಡವನ್ನು ಪ್ರಕಟಿಸಿದೆ. ಜಸ್‌ಪ್ರೀತ್ ಬುಮ್ರಾ ಹಾಗೂ ಮೊಹಮದ್ ಶಮಿಗೆ ಎರಡು ಸರಣಿಗೆ ವಿಶ್ರಾಂತಿ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮ ತಂಡಕ್ಕೆ ಮರಳಿದಿದ್ದಾರೆ. ಕುಲದೀಪ್ ಯಾದವ್ ಏಕದಿನ ತಂಡಕ್ಕೆ ವಾಪಸ್ ಆಗಿದ್ದಾರೆ. ಏಕದಿನ ಹಾಗೂ ಟಿ20 ತಂಡಕ್ಕೆ ರವಿ ಬಿಷ್ಣೋಯಿ ಹಾಗೂ ಆವೇಶ್ ಖಾನ್ ಆಯ್ಕೆಯಾಗಿದ್ದಾರೆ. ದೀಪಕ್ ಹೂಡಾ ಏಕದಿನ ತಂಡಕ್ಕೆ ಆಯ್ಕೆಯಾಗಿರುವುದು ಅಚ್ಚರಿ ಮೂಡಿಸಿದೆ. ಕೆ.ಎಲ್.ರಾಹುಲ್ ಮೊದಲ ಏಕದಿನ ಪಂದ್ಯಕ್ಕೆ ಲಭ್ಯ ಇರುವುದಿಲ್ಲ. ಎರಡನೇ ಏಕದಿನ ಪಂದ್ಯದಿಂದ ಕೆ.ಎಲ್.ರಾಹುಲ್ ವೆಸ್ಟ್ ಇಂಡೀಸ್ ಸರಣಿಗೆ ತಂಡವನ್ನು ಸೇರಲಿದ್ದಾರೆ.
ಡಿಜಿ ಮಲೆನಾಡು.ಕಾಂ | ಜಾಹಿರಾತು ಮೊಬೈಲ್ ಸಂಖ್ಯೆ: 9483344208
ಇ-ಮೇಲ್ : [email protected]
ಭಾರತ ಏಕದಿನ ತಂಡ: ರೋಹಿತ್ ಶರ್ಮ(ನಾಯಕ), ಕೆ.ಎಲ್.ರಾಹುಲ್(ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಯಜುವೆಂದ್ರ ಚಹಲ್, ಕುಲ್‌ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್.
ಭಾರತ ಟಿ20 ತಂಡ: ರೋಹಿತ್ ಶರ್ಮ(ನಾಯಕ), ಕೆ.ಎಲ್.ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಯಜುವೆಂದ್ರ ಚಹಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮದ್ ಸಿರಾಜ್, ಹರ್ಷಲ್ ಪಟೇಲ್, ಆವೇಶ್ ಖಾನ್, ಭುವನೇಶ್ವರ್ ಕುಮಾರ್.