ಶಿವಮೊಗ್ಗ ಜಿಲ್ಲೆಯಲ್ಲಿ ಹರ್ ಘರ್ ತಿರಂಗ್ ಅಭಿಯಾನ
ಶಿವಮೊಗ್ಗ | 7 ಆಗಸ್ಟ್ 2022 | ಡಿಜಿ ಮಲೆನಾಡು.ಕಾಂ
ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಶಿವಮೊಗ್ಗ ಜಿಲ್ಲೆಯ ಎಲ್ಲ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡದ ಮೇಲೆ ರಾಷ್ಟ್ರಧ್ವಜ ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿ ಮನೆ ಮನೆಯಲ್ಲೂ ಆಗಸ್ಟ್ 13ರಿಂದ 15ರವರೆಗೆ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಘೋಷ ವಾಕ್ಯದಡಿ ಅಭಿಯಾನಕ್ಕೆ ಕರೆ ನೀಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯ ಪ್ರತಿ ಮನೆಗಳ, ಸರ್ಕಾರಿ ಕಚೇರಿ ಕಟ್ಟಡಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲು ಎಲ್ಲ ಸಿದ್ಧತೆ ಮಾಡಲಾಗಿದೆ. ರಾಷ್ಟ್ರಪ್ರೇಮದ ಪ್ರದರ್ಶನದ ಸಂಕೇತವಾದ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜಿಲ್ಲೆಯಲ್ಲಿ ಅಭಿಯಾನ ಯಶಸ್ವಿಯಾಗಿ ನೆರವೇರಿಸಲು ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ವ್ಯವಸ್ಥಿತವಾಗಿ ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಲು ಪ್ರೇರಣೆ ನೀಡುವ ಕಾರ್ಯ ಮಾಡಲಾಗಿದೆ ಎಂದು ಹೇಳಿದರು.
ಶಿವಮೊಗ್ಗ ತಾಲೂಕಿನಲ್ಲಿ 16,700, ಭದ್ರಾವತಿ ತಾಲೂಕು 17,500, ತೀರ್ಥಹಳ್ಳಿ 15,000, ಹೊಸನಗರ 15 ಸಾವಿರ, ಸಾಗರ 12 ಸಾವಿರ, ಸೊರಬ 14 ಸಾವಿರ ಮತ್ತು ಶಿಕಾರಿಪುರ ತಾಲೂಕಿನಲ್ಲಿ 19ಸಾವಿರ ಸೇರಿ ಒಟ್ಟು 1,09,200 ಧ್ವಜಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಕರಿಭೀಮಣ್ಣ ಮೂಕಪ್ಪನವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು.