ವಿಕಲಚೇತನ ಇಲಾಖೆಯಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ | 2 ಆಗಸ್ಟ್ 2022 | ಡಿಜಿ ಮಲೆನಾಡು.ಕಾಂ
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರೀಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಆಸಕ್ತರು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಅರ್ಜಿಯನ್ನು ಪಡೆದು ಆಗಸ್ಟ್ 21 ರೊಳಗೆ ತ್ರಿಪ್ರತಿಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್‍ಎನ್‍ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ www.dwdsc.kar.nic.in ಪರಿಶೀಲಿಸುವಂತೆ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ಎಂ.ದೊಡ್ಡಮನಿ ತಿಳಿಸಿದ್ದಾರೆ.
