ಆಗಸ್ಟ್‌ 6ಕ್ಕೆ ಪೆಸಿಟ್‌ ಕಾಲೇಜಿನಲ್ಲಿ ಉದ್ಯೋಗ ಮೇಳ

ಆಗಸ್ಟ್‌ 6ಕ್ಕೆ ಪೆಸಿಟ್‌ ಕಾಲೇಜಿನಲ್ಲಿ ಉದ್ಯೋಗ ಮೇಳ

ಶಿವಮೊಗ್ಗ | 3 ಆಗಸ್ಟ್‌ 2022 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಪೆಸಿಟ್‌ ಕಾಲೇಜಿನಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  ಹಾಗೂ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜು ವತಿಯಿಂದ ಆಗಸ್ಟ್ 6 ರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಪದವಿ ಶಿಕ್ಷಣ ಪೂರೈಸಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಹೆಸರನ್ನು ನೊಂದಾಯಿಸಿಕೊಳ್ಳಲು ಹಾಗೂ ಮಾಹಿತಿಗೆ ದೂರವಾಣಿ ಸಂಖ್ಯೆ 08182 255294, ಮೊಬೈಲ್‌ ಸಂಖ್ಯೆ 8217478207 ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

digimalenadu

ಶಿವಮೊಗ್ಗ
error: Content is protected !!