ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅವಶ್ಯಕ ಸೌಕರ್ಯ ಒದಗಿಸಬೇಕು

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅವಶ್ಯಕ ಸೌಕರ್ಯ ಒದಗಿಸಬೇಕು

ಶಿವಮೊಗ್ಗ | 25 ಆಗಸ್ಟ್‌ 2022 | ಡಿಜಿ ಮಲೆನಾಡು.ಕಾಂ

ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅವಶ್ಯಕವಿರುವ ಸೌಕರ್ಯಗಳನ್ನು ಒದಗಿಸಬೇಕು. ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಗುರುತಿಸಿ ಅವರಲ್ಲಿ ಸಂತಸ ಮೂಡಿಸುವುದು ಸಾರ್ಥಕ ಕೆಲಸ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ರೋಟರಿ ಶಿವಮೊಗ್ಗ ಪೂರ್ವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತೋತ್ಸವ ಪ್ರಯುಕ್ತ ಆಯೋಜಿಸಿದ್ದ “ಕಲಿಕಾ ನೂನ್ಯತೆ ಮತ್ತು ವಿಶೇಷ ಅಗತ್ಯವುಳ್ಳ ಮಕ್ಕಳ ಶೈಕ್ಷಣಿಕ ಕಾರ್ಯಾಗಾರ”ದಲ್ಲಿ ಮಾತನಾಡಿದರು.

ವಿಶೇಷ ಅಗತ್ಯವುಳ್ಳ ಮಕ್ಕಳಲ್ಲಿ ಬದುಕಿನ ಭರವಸೆಯ ಕಿರಣಗಳನ್ನು ಮೂಡಿಸಿ ಸ್ಫೂರ್ತಿ ತುಂಬುತ್ತಿರುವ ಕಾರ್ಯ ಅಭಿನಂದನೀಯವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಸೇವಾ ಕಾರ್ಯಗಳನ್ನು ಎಲ್ಲರೂ ಒಟ್ಟುಗೂಡಿ ನಡೆಸಬೇಕು ಎಂದು ತಿಳಿಸಿದರು.

ರೋಟರಿ ಜಿಲ್ಲಾ ಗವರ್ನರ್ ಜಯಗೌರಿ ಹಾದಿಗಲ್ಲು ಮಾತನಾಡಿ, ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಟ್ಟುಗೂಡಿಸಿ ಆಯೋಜಿಸಿರುವ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ನೀರಿಕ್ಷೆಗೂ ಮೀರಿ ಮಕ್ಕಳು ಭಾಗವಹಿಸಿದ್ದು, ರೋಟರಿ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರವಾದ ಕೆಲಸಗಳನ್ನು ಮಾಡುತ್ತಿದೆ. ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಾಡಿರುವ ಕೆಲಸ ಶ್ಲಾಘನೀಯ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸುಮತಿ ಜಿ.ಕುಮಾರಸ್ವಾಮಿ ಮಾತನಾಡಿ, ಪ್ರತಿಯೊಬ್ಬರ ಜೀವನದ ಏಳಿಗೆಯಲ್ಲಿ ಉತ್ತಮ ಶಿಕ್ಷಣವೇ ಬುನಾದಿಯಾಗಿದೆ. ಮಗುವಿನ ಮನಸ್ಸಿನಲ್ಲಿ ಹುದುಗಿರುವ ಅಂತಃಶಕ್ತಿಯನ್ನು ಹೊರಗೆಳೆಯಲು ಪ್ರೇರಣೆ ಅಗತ್ಯ. ವಿಶೇಷ ಅಗತ್ಯವುಳ್ಳ ಮಕ್ಕಳಿಗಾಗಿ ರಾಜ್ಯದಲ್ಲಿಯೇ ಪ್ರಥಮವಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹೇಳಿದರು.

ಕಲಿಕಾಮೃತ ಕಾರ್ಯಕ್ರಮ ಎಲ್ಲ ಹೋಬಳಿಗಳಲ್ಲೂ ನಡೆಯುವಂತೆ ಆಗಬೇಕು. ಸಮಾಜಮುಖಿ ಚಿಂತನೆಯೊಂದಿಗೆ ರೋಟರಿ ಸಂಸ್ಥೆಯು ಸಾಮಾಜಿಕ ಸೇವಾ ಕಾರ್ಯಗಳಿಗೆ ನಿರಂತರವಾಗಿ ಜತೆಯಾಗಿರಲಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಆಯೋಜಿಸಿರುವ ಕಲಿಕಾಮೃತ ಕಾರ್ಯಾಗಾರ ರಾಜ್ಯಕ್ಕೆ ಮಾದರಿಯಾದ ಕಾರ್ಯಕ್ರಮ ಆಗಿದೆ. ವಿಶೇಷ ಅಗತ್ಯವುಳ್ಳ ಮಕ್ಕಳಲ್ಲಿ ಸಾಧಿಸುವ ಛಲ ತುಂಬುತ್ತಿರುವ ಉತ್ತಮ ಕಾರ್ಯ ಮಾಡಿದ ಎಲ್ಲರಿಗೂ ಅಭಿನಂದನೆಗಳು. ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗುವುದಿಲ್ಲ ಎಂದು ಹೇಳಿದರು.

ಐದು ನೂರಕ್ಕೂ ಹೆಚ್ಚಿನ ಶಿಕ್ಷಕರು ಕಾರ್ಯಾಗಾರದ ಸದುಪಯೋಗ ಪಡಿಸಿಕೊಂಡರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಸಹಶಿಕ್ಷಕ ಕುಮಾರ್, ಮನೋವೈದ್ಯೆ ಶುಭ್ರತಾ ಕೆ.ಎಸ್. ಮತ್ತಿತರರು ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!