ಉತ್ತಮ ಆಹಾರ ಪದ್ಧತಿಯಿಂದ ಉತ್ತಮ ಆರೋಗ್ಯ

ಉತ್ತಮ ಆಹಾರ ಪದ್ಧತಿಯಿಂದ ಉತ್ತಮ ಆರೋಗ್ಯ

ಶಿವಮೊಗ್ಗ | 16 ಆಗಸ್ಟ್‌ 2022 | ಡಿಜಿ ಮಲೆನಾಡು.ಕಾಂ

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಉತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ರೋಟರಿ ಪೂರ್ವ ಶಿವಮೊಗ್ಗ ಕ್ಲಬ್ ಅಧ್ಯಕ್ಷೆ ಸುಮತಿ ಜಿ.ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ರೋಟರಿ ಪೂರ್ವ ಶಿವಮೊಗ್ಗ ಹಾಗೂ ರೋಟರಿ ಬೆಂಗಳೂರು ಪ್ಲಾಟಿನಂ ಸಿಟಿ, ಮಂಡಗದ್ದೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಕಣ್ಣು ಹಾಗು ಆರೋಗ್ಯ ಉಚಿತ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಆಸ್ಪತ್ರೆಗಳು ಕಡಿಮೆ ಇದ್ದು, ತುರ್ತು ಸಂದರ್ಭಗಳಲ್ಲಿ ನಗರಗಳಿಗೆ ಕರೆದೊಯ್ಯಬೇಕಾದ ಪರಿಸ್ಥಿತಿ ಇರುತ್ತದೆ. ಇಂತಹ ಶಿಬಿರಗಳ ಆಯೋಜನೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ಪ್ರತಿಯೊಂದು ತಪಾಸಣೆ ಮಾಡಲು ಸಾವಿರಾರು ರೂ.ಗಳನ್ನು ವ್ಯಯಿಸುವ ಬದಲು ರೋಟರಿ ಸಂಸ್ಥೆಯಿಂದ ನಡೆಸುವ ಇಂತಹ ಉಚಿತ ಆರೋಗ್ಯ ಸಾಮಾನ್ಯ ಶಿಬಿರಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು.

ರೋಟರಿ ಬೆಂಗಳೂರು ಪ್ಲಾಂಟಿನಂ ಕ್ಲಬ್ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ಅನೇಕ ಸಾಮಾಜಿಕ ಸೇವೆಗಳನ್ನು ಮಾಡುತ್ತ ಬಂದಿದೆ. ವಿದ್ಯಾರ್ಥಿಗಳಿಗೆ ಕೆರಿಯರ್ ಗೈಡ್ ಹಾಗೂ ಮಹಿಳೆಯರಿಗೆ ಅಪೌಷ್ಟಿಕತೆಯ ನಿವಾರಣೆಗಾಗಿ ಪೋಷ್ಟಿಕಾಂಶಗಳ ಬಗ್ಗೆ ಮಾಹಿತಿ ಹಾಗೂ ಆರೋಗ್ಯ ತಪಾಸಣೆಯನ್ನು ನಡೆಸುತ್ತ ಬಂದಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಡಾ. ಶುಭಾ, ಡಾ. ಅರ್ಪಿತಾ ಮಾತನಾಡಿದರು. ಮಂಡಗದ್ದೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ 400 ಜನ ನಾಗರಿಕರಿಗೆ ಕಣ್ಣಿನ ಉಚಿತ ತಪಾಸಣೆ ನಡೆಸಲಾಯಿತು. ಡಾ. ಗೋಪಿಚಂದ್, ರೋಟರಿ ಪೂರ್ವ ಶಿವಮೊಗ್ಗ ಕ್ಲಬ್ ಕಾರ್ಯದರ್ಶಿ ಕೆ.ಕುಮಾರಸ್ವಾಮಿ, ಐಟಿ ನಿರ್ದೇಶಕ ಅರುಣ್ ದೀಕ್ಷಿತ್, ತೆಲ್ಯಾ ಪ್ರೇಮ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!