ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಲಿಕಾ ಚೇತರಿಕೆ
ಶಿವಮೊಗ್ಗ | 3 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ
ಕರೋನಾ ಪ್ರತಿಯೊಬ್ಬರ ಜೀವನ ಹಾಗೂ ಸಾಮಾಜಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಿತ್ತು. ಇದರ ಜತೆಯಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲೂ ಅನೇಕ ಬದಲಾವಣೆಗೆ ಕರೋನಾ ಕಾರಣವಾಯಿತು ಎಂದು ಸಂಪನ್ಮೂಲ ವ್ಯಕ್ತಿ ಹಸನ್ ಬೆಳ್ಳಿಗನೂಡು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ರೋಟರಿ ಶಿವಮೊಗ್ಗ ಪೂರ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಕರೋನಾ ನಂತರ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರದ ಮುಂದೆ ಇರುವ ಸವಾಲು ಹಾಗೂ ಕೈಗೊಂಡ ಯೋಜನೆಗಳು” ವಿಷಯ ಕುರಿತು ಉಪನ್ಯಾಸ ನೀಡಿದರು.
ಕರೊನಾ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವು ಅತ್ಯಂತ ಕಷ್ಟಕರವಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆಗೆ ಕಾರಣವಾಯಿತು. ಶೈಕ್ಷಣಿಕ ಪ್ರಗತಿಗೆ ಕರೋನಾ ಅಡ್ಡಿಯಾಯಿತು ಎಂದು ತಿಳಿಸಿದರು.
ಸರ್ಕಾರ ಸೂಚಿಸಿದಂತೆ ವಿದ್ಯಾಗಮ ಯೋಜನೆ ಮುಖಾಂತರ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಬೇಕಾಯಿತು. ಆನ್ಲೈನ್ ತರಗತಿ, ವಿದ್ಯಾಗಮ ಹಾಗೂ ವಠಾರ ಶಾಲೆ ಮುಖಾಂತರ ಮಕ್ಕಳ ಭೇಟಿ ಮಾಡಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲಾಯಿತು ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮೂರು ವರ್ಷಗಳ ಕಲಿಕೆಯ ಹಿನ್ನಡೆ ಸುಧಾರಿಸಲು ಸರ್ಕಾರವು 2022-23ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚೇತರಿಕೆ ಎಂಬ ವಿನೂತನ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಣನೀಯವಾದ ಬದಲಾವಣೆ ಆಗಿದೆ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆಯು ಸಾವಿರಾರು ಟ್ಯಾಬ್ಗಳನ್ನು ಸರ್ಕಾರಿ ಶಾಲೆ ಮಕ್ಕಳಿಗೆ ನೀಡಿದೆ. ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್, ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದೆ ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕೆ.ಕುಮಾರಸ್ವಾಮಿ, ಸಹಾಯಕ ಮಾಜಿ ಗವರ್ನರ್ ಜಿ.ವಿಜಯ್ಕುಮಾರ್, ಮಂಜುನಾಥ ಕದಂ, ವಸಂತ್ ಹೋಬಳಿದಾರ್ ಉಪಸ್ಥಿತರಿದ್ದರು.