ಸದೃಢ ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ತರ

ಸದೃಢ ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ತರ

ಶಿವಮೊಗ್ಗ | 11 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಎಲ್ಲ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ರೋಟರಿ ವಲಯ 11ರ ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಶಿವಮೊಗ್ಗ ತಾಲೂಕಿನ ಮಕ್ಕಳಿಂದ ಅತ್ತ್ಯುತ್ತಮ ಶಿಕ್ಷಕ ಎಂದು ಗುರುತಿಸಿದ ಆರು ಶಿಕ್ಷಕರಿಗೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಅಂತರಾಷ್ಟ್ರೀಯ ಸಂಸ್ಥೆ ರೋಟರಿ ನೀಡುವ “ನೇಷನ್ ಬಿಲ್ಡರ್ ಅವಾರ್ಡ್” ಪ್ರಶಸ್ತಿ ನೀಡಿ ಸನ್ಮಾನಿಸಿ ಮಾತನಾಡಿದರು.

ದೇಶ ಉತ್ತಮವಾಗಿ ಅಭಿವೃದ್ದಿ ಹೊಂದಬೇಕಾದರೆ ದೇಶದ ಪ್ರಜೆಗಳ ಕರ್ತವ್ಯ ಕೂಡ ಮುಖ್ಯ. ಉತ್ತಮ ಪ್ರಜೆಗಳ ರೂಪಿಸುವ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳ ಜೀವನವನ್ನು ಸರಿದಾರಿಯಲ್ಲಿ ಸಾಗುವಂತೆ ಮಾರ್ಗದರ್ಶನ ನೀಡುತ್ತಾರೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ. ಕುಮಾರಸ್ವಾಮಿ ಮಾತನಾಡಿ, ಮಕ್ಕಳ ಭವಿಷ್ಯ ರೂಪಿಸುವ ಮಹತ್ಕಾರ್ಯವನ್ನು ಶಿಕಕ್ಷರು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಶಿಕ್ಷಕರ ಮಾರ್ಗದರ್ಶನ ಅತ್ಯಂತ ಮುಖ್ಯ. ರೋಟರಿ ಸಂಸ್ಥೆಯು ಶಿಕ್ಷಕರಿಗೆ ಸನ್ಮಾನಿಸುವ ವಿಶೇಷ ಕಾರ್ಯ ನಡೆಸುತ್ತಿದೆ ಎಂದು ತಿಳಿಸಿದರು.

ಶಿಕ್ಷಕರಾದ ಮೀನಾಕ್ಷಿ.ಎ.ಎಂ., ಸರಸ್ವತಿ.ಕೆ.ಎಂ., ರೇಣುಕಮ್ಮ, ನಾಗರತ್ನ, ಶಕುಂತಲಾ ಹಾಗೂ ವಸುಮತಿ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಸನ್ಮಾನಿಸಲಾಯಿತು.

ರೋಟರಿ ಶಿವಮೊಗ್ಗ ಪೂರ್ವ ಶಾಲೆ ಮ್ಯಾನೇಜಿಂಗ್ ಟ್ರಸ್ಟಿ ಚಂದ್ರಶೇಖರಯ್ಯ, ರೋಟರಿ ಸಾಕ್ಷರತಾ ಚೇರ್ಮನ್ ಜಿ.ವಿಜಯ್‌ಕುಮಾರ್, ಶ್ರೀಕಾಂತ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಬಿಂದು, ಚಂದ್ರಹಾಸ್ ರಾಯ್ಕರ್ ಮತ್ತಿತರರು ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!