ಶಾಲಾ ಶಿಕ್ಷಕರ ನೇಮಕಾತಿಯ ದಾಖಲಾತಿ ಪರಿಶೀಲನೆ

ಶಾಲಾ ಶಿಕ್ಷಕರ ನೇಮಕಾತಿಯ ದಾಖಲಾತಿ ಪರಿಶೀಲನೆ

ಶಿವಮೊಗ್ಗ | 05 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

2021-2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಅ. 6ರಿಂದ 14ರವರೆಗೂ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಶಿವಮೊಗ್ಗದ  ಕಸ್ತೂರ ಬಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಅಕ್ಟೋಬರ್‌ 6ರಿಂದ 14ರವರೆಗೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯಲಿದ್ದು, ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

2021-2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಶಿಕ್ಷಣ ಇಲಾಖಾ ವೆಬ್‍ಸೈಟ್‍ನಲ್ಲಿ 1:2 ಅನುಪಾತದ ಪರಿಶೀಲನಾ ಪಟ್ಟಿ ಪ್ರಕಟಿಸಲಾಗಿದೆ. ಅದರನ್ವಯ 816 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ತಂಡಗಳನ್ನು ರಚಿಸಲಾಗಿದೆ.  ದಾಖಲಾತಿಗಳ ಪರಿಶೀಲನೆಗೆ ಒಟ್ಟು 6 ತಂಡಗಳನ್ನು ರಚಿಸಲಾಗಿದೆ.

digimalenadu

ಶಿವಮೊಗ್ಗ
error: Content is protected !!