ಜಂಬೂ ಸವಾರಿಯೊಂದಿಗೆ ಶಿವಮೊಗ್ಗದಲ್ಲಿ ಅದ್ಧೂರಿ ದಸರಾ

ಜಂಬೂ ಸವಾರಿಯೊಂದಿಗೆ ಶಿವಮೊಗ್ಗದಲ್ಲಿ ಅದ್ಧೂರಿ ದಸರಾ

ಶಿವಮೊಗ್ಗ | 06 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದಲ್ಲಿ ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ದಸರಾ ಉತ್ಸವ ಜಂಬೂ ಸವಾರಿಯೊಂದಿಗೆ ಅದ್ಧೂರಿಯಾಗಿ ಜರುಗಿತು. ಸಾವಿರಾರು ಜನರು ದಸರಾ ಉತ್ಸವದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯದ ಆವರಣದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ಚಾಮುಂಡೇಶ್ವರಿ ಮೂರ್ತಿಯ ವೈಭವದ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಜಂಬೂ ಸವಾರಿ ಮೆರವಣಿಗೆಯು ಸಾಗಿ ಫ್ರೀಡಂ ಪಾರ್ಕ್‌ ತಲುಪಿತು. ವಿವಿಧ ಬಡಾವಣೆಗಳ ಐವತ್ತಕ್ಕೂ ಅಧಿಕ ದೇವಸ್ಥಾನಗಳ ಸಮಿತಿಯವರು ದೇವರ ಮೂರ್ತಿಯೊಂದಿಗೆ ಭಾಗವಹಿಸಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಮೇಯರ್‌ ಸುನೀತಾ ಅಣ್ಣಪ್ಪ, ಉಪಮೇಯರ್‌ ಶಂಕರ್‌, ಎಸ್.ಎನ್.ಚನ್ನಬಸಪ್ಪ, ಆಯುಕ್ತ ಕೆ.ಮಾಯಣ್ಣಗೌಡ, ತಹಸೀಲ್ದಾರ್‌ ನಾಗರಾಜ್‌ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಫ್ರೀಡಂ ಪಾರ್ಕ್‌ ನ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್‌.ಈಶ್ವರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಲ್‌ಸಿ ಡಿ.ಎಸ್‌.ಅರುಣ್‌ ಹಾಗೂ ಪಾಲಿಕೆ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ದಸರಾ ಉತ್ಸವದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ವೀರಗಾಸೆ, ಕೀಲುಕುದುರೆ, ಚಂಡೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಮಾಹಿತಿ ಪ್ರದರ್ಶನ, ವೈವಿಧ್ಯಮಯ ವೇಷಭೂಷಣ ಧರಿಸಿದ್ದ ಕಲಾವಿದರು ಸಾರ್ವಜನಿಕರ ಗಮನ ಸೆಳೆದರು.

digimalenadu

ಶಿವಮೊಗ್ಗ
error: Content is protected !!