ಪ್ರತಿ ನಿತ್ಯ ಯೋಗ ಅಭ್ಯಾಸದಿಂದ ಉತ್ತಮ ಆರೋಗ್ಯ

ಪ್ರತಿ ನಿತ್ಯ ಯೋಗ ಅಭ್ಯಾಸದಿಂದ ಉತ್ತಮ ಆರೋಗ್ಯ

ಶಿವಮೊಗ್ಗ | 11 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ಪ್ರತಿ ನಿತ್ಯ ಯೋಗ ಮತ್ತು ಪ್ರಾಣಾಯಾಮ ಅಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಬೆಂಗಳೂರು ಗ್ಲೋಬಲ್ ಯೋಗ ಸಂಸ್ಥೆಯ ಯೋಗಿ ದೇವರಾಜ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಶಿವಮೊಗ್ಗ ನಗರದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಗದ ಮಹತ್ವ ಕುರಿತು ಮಾತನಾಡಿ, ಯೋಗ ಎಂದರೆ ಕೇವಲ ಆಸನಗಳನ್ನು ಮಾಡುವುದಲ್ಲ. ನಿಯಮಬದ್ಧವಾದ ಉಸಿರಾಟದ ಜತೆಯಲ್ಲಿ ಆಸನಗಳನ್ನು ಮಾಡಿದಾಗ ಪ್ರಯೋಜನ ಲಭಿಸುತ್ತದೆ. ಆರೋಗ್ಯಯುತ ಜೀವನಶೈಲಿ ನಮ್ಮದಾಗುವ ಜತೆಯಲ್ಲಿ ಸಕರಾತ್ಮಕ ಮನೋಭಾವ ಬೆಳೆಯುತ್ತದೆ ಎಂದರು.

ರೋಟರಿ ಪಿಡಿಜಿ ರವಿ ಮಾತನಾಡಿ, ಸಾವಿರಾರು ವರ್ಷಗಳ ಪರಂಪರೆ ಇರುವ ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮ ಅಭ್ಯಾಸಗಳ ಗುಂಪು. ನಿಯಮಿತ ಆಹಾರ ಕ್ರಮ ಮತ್ತು ಯೋಗ ಅಭ್ಯಾಸಗಳಿಂದ ಆರೋಗ್ಯಯುತ ಜೀವನ ನಡೆಸಬಹುದಾಗಿದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ.ಕುಮಾರಸ್ವಾಮಿ ಮಾತನಾಡಿ, ಯೋಗದ ಮಹತ್ವ ಅರಿತಿರುವ ಎಲ್ಲರೂ ಯೋಗ ಅಭ್ಯಾಸ ಮಾಡುತ್ತಿದ್ದಾರೆ. ವಿಶ್ವದ ನೂರಾರು ದೇಶಗಳಲ್ಲಿ ಯೋಗ ಶಿಕ್ಷಣ ಆರಂಭವಾಗಿದೆ ಎಂದು ತಿಳಿಸಿದರು.

ವಲಯ 11ರ ಸಹಾಯಕ ಗವರ್ನರ್ ಗುಡದಪ್ಪ ಕಸಬಿ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕೆ.ಕುಮಾರಸ್ವಾಮಿ, ಚಂದ್ರಹಾಸ ರಾಯ್ಕರ್, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಮಧುರಾ ಮಹೇಶ್, ಚಂದ್ರ ಹಾಗೂ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!