ಅಕ್ಟೋಬರ್‌ 28ರಂದು ನಡೆಯಬೇಕಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ 2022 ಕಾರ್ಯಕ್ರಮ ಮುಂದೂಡಿಕೆ

ಅಕ್ಟೋಬರ್‌ 28ರಂದು ನಡೆಯಬೇಕಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ 2022 ಕಾರ್ಯಕ್ರಮ ಮುಂದೂಡಿಕೆ

ಶಿವಮೊಗ್ಗ | 26 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್‌ 28ರಂದು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ 2022 ಕಾರ್ಯಕ್ರಮವನ್ನು ಕಾರಣಾಂತರದಿಂದ ಮುಂದೂಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಜಿಲ್ಲಾ ಮಟ್ಟದ ಯುವ ಉತ್ಸವ 2022 ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು. ಯುವ ಉತ್ಸವ ಕಾರ್ಯಕ್ರಮದ ಪರಿಕಲ್ಪನೆ ಮತ್ತು ಸ್ವರೂಪವನ್ನು ಅಭಿವೃದ್ಧಿ ಪಡಿಸಿ ಹೊಸ ಪರಿಕಲ್ಪನೆಯ ಜೊತೆಗೆ ಕಾರ್ಯಕ್ರಮ ಆಯೋಜಿಸಲಾಗುವುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಜಿಲ್ಲಾ ಮಟ್ಟದ ಯುವ ಉತ್ಸವ 2022 ಕಾರ್ಯಕ್ರಮಕ್ಕೆ ಈಗಾಗಲೇ ನೋಂದಣಿ ಮಾಡಿಕೊಂಡಿರುವವರು ಮುಂದಿನ ದಿನಾಂಕದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ತಿಳಿಸಿದ್ದಾರೆ.

digimalenadu

ಶಿವಮೊಗ್ಗ
error: Content is protected !!