ವೀರಶೈವ ಸಾಂಸ್ಕೃತಿಕ ಭವನದ ಉದ್ಘಾಟನೆ ನವೆಂಬರ್ 18ಕ್ಕೆ, ಬಾಳೆಹೊನ್ನೂರು ರಂಭಾಪುರಿ ಶ್ರೀ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯ

ವೀರಶೈವ ಸಾಂಸ್ಕೃತಿಕ ಭವನದ ಉದ್ಘಾಟನೆ ನವೆಂಬರ್ 18ಕ್ಕೆ, ಬಾಳೆಹೊನ್ನೂರು ರಂಭಾಪುರಿ ಶ್ರೀ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯ

ಶಿವಮೊಗ್ಗ | 17 ಜೂನ್‌ 2022 | ಡಿಜಿ ಮಲೆನಾಡು.ಕಾಂ

ಶ್ರೀ ವೀರಶೈವ ಕಲ್ಯಾಣ ಮಂದಿರ ವತಿಯಿಂದ ಶಿವಮೊಗ್ಗ ನಗರದ ಜೆ.ಎಚ್.ಪಟೇಲ್‌ ಬಡಾವಣೆಯಲ್ಲಿ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವೀರಶೈವ ಸಾಂಸ್ಕೃತಿಕ ಭವನ ನವೆಂಬರ್‌ 18ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶ್ರೀ ವೀರಶೈವ ಕಲ್ಯಾಣ ಮಂದಿರದ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಎನ್.ಜೆ.ರಾಜಶೇಖರ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಬಾಳೆಹೊನ್ನೂರು ರಂಭಾಪುರಿ ಶ್ರೀ ಡಾ. ವೀರಸೋಮೇಶ್ವರ ಜಗದ್ಗುರುಗಳು ಸಾನ್ನಿಧ್ಯ ವಹಿಸುವರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ನೆರವೇರಿಸುವರು. ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್‌.ಈಶ್ವರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪಾಲ್ಗೊಳ್ಳುವರು. ಶ್ರೀ ವೀರಶೈವ ಕಲ್ಯಾಣ ಮಂದಿರ ಅಧ್ಯಕ್ಷ ಟಿ.ವಿ.ಈಶ್ವರಯ್ಯ ಅಧ್ಯಕ್ಷತೆ ವಹಿಸುವರು.

ಯಡಿಯೂರು ಕ್ಷೇತ್ರ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಮಳಲಿಮಠ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನ ಪರಿಷತ್‌ ಶಾಸಕರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್‌, ಡಿ.ಎಸ್.ಅರುಣ್‌, ಮೇಯರ್‌ ಎಸ್.ಶಿವಕುಮಾರ್‌, ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್‌.ಜ್ಯೋತಿಪ್ರಕಾಶ್‌, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಎನ್.ಜೆ.ನಾಗರಾಜ್‌, ಎಸ್‌.ಮಲ್ಲೇಶಪ್ಪ, ಕೆ.ಎಸ್.ತಾರಾನಾಥ್‌, ರುದ್ರಮುನಿ ಎನ್.ಸಜ್ಜನ್‌, ಎಚ್‌.ಎಂ.ಚಂದ್ರಶೇಖರಪ್ಪ, ಆಶಾ ಚಂದ್ರಪ್ಪ ಸೇರಿದಂತೆ ಗಣ್ಯರು ಪಾಲ್ಗೊಳ್ಳುವರು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸರ್ಕಾರದ ಅನುದಾನ ಹಾಗೂ ದಾನಿಗಳಿಂದ ಸಂಗ್ರಹಿಸಿದ ಹಣದಲ್ಲಿ ಭವನ ನಿರ್ಮಾಣ ಮಾಡಲಾಗಿದೆ. 800 ಆಸನದ ಸಭಾಂಗಣ, 14 ಕೊಠಡಿ, ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಸುಸಜ್ಜಿತ ಭವನ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು. ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್‌.ಜ್ಯೋತಿಪ್ರಕಾಶ್‌, ಕಲ್ಯಾಣ ಮಂದಿರ ಅಧ್ಯಕ್ಷ ಟಿ.ವಿ.ಈಶ್ವರಯ್ಯ, ಕೆ.ಆರ್.ವೀರಣ್ಣ, ಎಸ್‌.ಎನ್‌.ರುದ್ರಮುನಿ, ಎಂ.ಎನ್‌.ಒಡೆಯರ್‌, ಎಸ್.ಪಿ.ಜಗನ್ನಾಥ್‌, ಜಿ.ವಿರೂಪಾಕ್ಷಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

digimalenadu

ಶಿವಮೊಗ್ಗ
error: Content is protected !!