ಇಸ್ರೋ ಸಂಸ್ಥೆ ಮುಖಾಂತರ ಯುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ

ಇಸ್ರೋ ಸಂಸ್ಥೆ ಮುಖಾಂತರ ಯುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ

ಶಿವಮೊಗ್ಗ | 3 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಯುವ ಸಮೂಹಕ್ಕೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳನ್ನು ಪ್ರಾರಂಭಿಸಲು ಭಾರತ ಸರ್ಕಾರವು ಇಸ್ರೋ ಸಂಸ್ಥೆಯ ಮೂಲಕ ಮುಕ್ತ ಅವಕಾಶ ನೀಡುತ್ತಿದೆ ಎಂದು ಇಸ್ರೋ ಸಂಸ್ಥೆಯ ಸಂವಹನ ಮತ್ತು ನಿಯಂತ್ರಣಾ ಕೇಂದ್ರದ ಉಪ ನಿರ್ದೇಶಕಿ ಕೆ.ಎಲ್.ಶಿವಾನಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿಭಾಗಗಳಿಗೆ ನೂತನವಾಗಿ ಪ್ರವೇಶಾತಿ ಪಡೆದಿರುವ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾ ಸಂಸ್ಥೆಗಳು ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ಸಂಶೋಧನೆಯ ಕುರಿತು ಹೊಸ ವೇದಿಕೆಗಳನ್ನು ನಿರ್ಮಾಣ ಮಾಡಬೇಕಿದೆ. ಇದರಿಂದ ಪ್ರಸ್ತುತತೆಯ ಆಧಾರಿತ ಕಲಿಕೆಗೆ ಅನುಕೂಲವಾಗಲಿದೆ. ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಕೆಲವೇ ವಿಭಾಗಗಳಿಂದ ಭವಿಷ್ಯ ಎಂಬ ಭ್ರಮೆ ಬೇಡ. ಎಲ್ಲಾ ವಿಭಾಗಗಳು ಅದ್ಭುತ ಅವಕಾಶಗಳನ್ನು ಹಿಡಿದಿಟ್ಟಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಕಾಲೇಜಿನ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳ ಮೂಲಕ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಕಳೆದ ವರ್ಷ 8 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದು ಹೇಳಿದರು.

ಎನ್ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಮಧುರಾವ್, ಸುಧೀರ್, ಅನಂತದತ್ತ, ಕುಲಸಚಿವ ಪ್ರೊ. ಟಿ.ಎಸ್.ಹೂವಯ್ಯಗೌಡ, ಪ್ರಾಚಾರ್ಯ ಡಾ‌.ಕೆ.ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ‌.ಮಂಜುನಾಥ ಉಪಸ್ಥಿತರಿದ್ದರು.

digimalenadu

ಶಿವಮೊಗ್ಗ
error: Content is protected !!