ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಅಧಿಕ ಆಕಾಂಕ್ಷಿಗಳು ಭಾಗಿ, ಇನ್ನೂರಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ

ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಅಧಿಕ ಆಕಾಂಕ್ಷಿಗಳು ಭಾಗಿ, ಇನ್ನೂರಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ

ಶಿವಮೊಗ್ಗ | 14 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಉದ್ಯೋಗ ಹುಡುಕುವ ಜತೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಕೈಗಾರಿಕಾ ಆರಂಭಿಸುವ ಬಗ್ಗೆ ಆಲೋಚನೆ ನಡೆಸಬೇಕು. ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕಾದರೆ ಆತ್ಮವಿಶ್ವಾಸ ಹಾಗೂ ಧೈರ್ಯ ಮುಖ್ಯ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಪದವಿ ಶಿಕ್ಷಣ ಪೂರೈಸಿದ ನಂತರ ಮುಂದೆ ಯಾವ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂಬ ಸ್ಪಷ್ಟ ಕಲ್ಪನೆ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಗುರುಗಳ ಮಾರ್ಗದರ್ಶನ ಹಾಗೂ ಆಸಕ್ತಿ ಕ್ಷೇತ್ರದಲ್ಲಿ ಸರಿಯಾದ ತರಬೇತಿ ಪಡೆಯುವುದರಿಂದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ತಿಳಿಸಿದರು.

ನಾನು ಪದವಿ ಪೂರೈಸಿದ ನಂತರ ಹಿರಿಯರ ಮಾರ್ಗದರ್ಶನದಲ್ಲಿ ಸಣ್ಣ ಕೈಗಾರಿಕಾ ಆರಂಭಿಸಿ ಅನೇಕ ಸವಾಲುಗಳನ್ನು ಎದುರಿಸಿ ಹಂತ ಹಂತವಾಗಿ ಬೆಳೆದೆ. ವಿವಿಧ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸಿದೆ. ಪ್ರಯತ್ನ ಮಾಡುವಾಗ ಹಿಂದೇಟು ಹಾಕಿದರೆ ಯಾವ ಕ್ಷೇತ್ರವೇ ಆದರೂ ವೈಫಲ್ಯ ಕಾಣುತ್ತೇವೆ. ಆದರೆ ಪ್ರಯತ್ನ ನಿರಂತರವಾಗಿ ಇದ್ದಾಗ ಮಾತ್ರ ನಮ್ಮ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ಕೌಶಲ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ. ದೇಶದ ಯುವಜನರಿಗೆ ಕೌಶಲ್ಯ ಕಲಿಕೆ ಒದಗಿಸುವ ದೃಷ್ಠಿಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಕೌಶಲ್ಯ ಉದ್ಯೋಗ ಒದಗಿಸುವ ಜತೆಯಲ್ಲಿ ಸ್ವಯಂ ಉದ್ಯೋಗ ಆರಂಭಿಸಲು ಎಲ್ಲ ರೀತಿ ಸಾಲ ಸೌಲಭ್ಯ ನೀಡುವ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರವಾಸೋದ್ಯಮ ಕ್ಷೇತ್ರ, ಶಿಕ್ಷಣ, ಆರೋಗ್ಯ, ಹಣಕಾಸು ಕ್ಷೇತ್ರಗಳಲ್ಲಿ ಇರುವ ಅವಕಾಶಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸ್ವಯಂ ಉದ್ಯೋಗ ಅವಕಾಶ ಸೃಷ್ಠಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಸಂಸ್ಥೆ ಆರಂಭಿಸುವ ಮೂಲಕ ಅನೇಕರಿಗೆ ಉದ್ಯೋಗ ಒದಗಿಸಬೇಕು ಎಂದು ತಿಳಿಸಿದರು.

ಉದ್ಯೋಗ ಮೇಳದಲ್ಲಿ ಒಟ್ಟು ನೋಂದಣಿ ಆದವರು 1545, ಮೇಳಕ್ಕೆ ಹಾಜರಾದವರು 1011, ಅಂತಿಮ ಆಯ್ಕೆ ಆದವರು 475, ಒಟ್ಟು ಉದ್ಯೋಗ ಅವಕಾಶಕ್ಕೆ ಆಯ್ಕೆಯಾದವರು  222 ಅಭ್ಯರ್ಥಿಗಳು. | ಎಚ್.ಎಂ.ಸುರೇಶ್, ಶಿವಮೊಗ್ಗ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ

ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. 7ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಶಿಕ್ಷಣ ಪೂರೈಸಿದ ಎಲ್ಲರಿಗೂ ಅವಕಾಶ ಇತ್ತು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್, ಟೀಕ್ಯಾನಾಯ್ಕ್, ಸಮನ್ವಯ ಕಾಶಿ, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!