ಸದೃಢ ದೇಶ ನಿರ್ಮಾಣ ಮಾಡಲು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮುಖ್ಯ

ಸದೃಢ ದೇಶ ನಿರ್ಮಾಣ ಮಾಡಲು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮುಖ್ಯ

ಶಿವಮೊಗ್ಗ | 9 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಸಾರ್ವಜನಿಕರ ಅಭಿಪ್ರಾಯವು ಉತ್ತಮ ದೇಶ ನಿರ್ಮಾಣ ಮಾಡುವಲ್ಲಿ ಸಹಕಾರಿ ಆಗಲಿದೆ. ಸಾರ್ವಜನಿಕರ ಅಭಿಪ್ರಾಯದಿಂದ ಸರ್ಕಾರಗಳು ಆಡಳಿತ ಶೈಲಿ ಉತ್ತಮಪಡಿಸಿಕೊಳ್ಳುವಲ್ಲಿ ಅನುಕೂಲ ಆಗಲಿದೆ ಎಂದು ವಿಶ್ವ ಚೆಸ್ ಮಾಸ್ಟರ್ ಸ್ಟ್ಯಾನಿ ಜಾರ್ಜ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ನಗರ ಕುರಿತ ಸಾರ್ವಜನಿಕ ಅಭಿಪ್ರಾಯ ಸಮೀಕ್ಷೆ ಕಾರ್ಯದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿವಮೊಗ್ಗ ಜಿಲ್ಲೆ ಸಾರಿಗೆ ಕ್ಷೇತ್ರದಲ್ಲಿ ಮಹತ್ತರ ಪ್ರಗತಿ ಸಾಧಿಸಿದ್ದು, ವಿಮಾಣ ನಿಲ್ದಾಣ ಶೀಘ್ರದಲ್ಲಿ ಬರುತ್ತಿದೆ. ರಸ್ತೆ, ರೈಲು ಮಾರ್ಗದ ಸಾರಿಗೆ ವ್ಯವಸ್ಥೆ ಅತ್ತ್ಯುತ್ತಮ ಪ್ರಗತಿ ಸಾಧಿಸಿದೆ. ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಶಿವಮೊಗ್ಗ ಉನ್ನತ ಪ್ರಗತಿ ಸಾಧಿಸಿದೆ. ಇದರಿಂದ ಉದ್ಯೋಗ ಸೃಷ್ಠಿ ಆಗುತ್ತಿದೆ. ಶಿವಮೊಗ್ಗ ಮುಂದಿನ ದಿನಗಳಲ್ಲಿ ಮಾದರಿಯಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸ್ಮಾರ್ಟ್ ಸಿಟಿ ಸಾರ್ವಜನಿಕ ಸಂಪರ್ಕಾಧಿಕಾರಿ ಬ್ರಿಜಿಟ್ ವರ್ಗೀಸ್ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಆರೊಗ್ಯ, ಶಿಕ್ಷಣ, ನೀರು ಪೂರೈಕೆ, ಮೂಲಸೌಕರ್ಯ ಸೇರಿದಂತೆ ಅಗತ್ಯ ವ್ಯವಸ್ಥೆಗಳ ಬಗ್ಗೆ ಮಾಹಿತಿ ದಾಖಲಿಸುವ ಕಾರ್ಯ ನಡೆಯುತ್ತಿದೆ. ಎಲ್ಲ ವರ್ಗದ ಜನರು ಭಾಗವಹಿಸುವ ರೀತಿಯಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಶರತ್ ಮಾತನಾಡಿ, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಗಳ ಮಾಹಿತಿ ದಾಖಲೀಕರಣ ಕಾರ್ಯ ನಡೆಯುತ್ತಿದ್ದು, ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ಸ್ಮಾರ್ಟ್ ಸಿಟಿ ಮಿಷನ್ ಮೂಲಕ ಜೀವನ ಗುಣಮಟ್ಟ ಸೌಕರ್ಯ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ ಎಂದರು. ಸಮನ್ವಯ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ, ಹಿರಿಯ ಕಾರ್ಯನಿರ್ವಾಹಕ ಅಭಿಯಂತರ ವಿಜಯ್ ಕುಮಾರ್, ಸಮನ್ವಯ ಸ್ವಯಂಸೇವಕರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!