ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಎಸ್.ರುದ್ರೇಗೌಡ, ಟಿ.ಆರ್.ಅಶ್ವತ್ಥ್ ನಾರಾಯಣ ಅವರಿಗೆ ಸನ್ಮಾನ
ಶಿವಮೊಗ್ಗ | 12 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕಲಬುರಗಿಯಲ್ಲಿ ಆಯೋಜಿಸಿದ್ದ “ಉತ್ತರ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ರಾಜ್ಯಮಟ್ಟದ ಸಮ್ಮೇಳನದಲ್ಲಿ” ವಿಧಾನ ಪರಿಷತ್ ಶಾಸಕ ಎಸ್.ರುದ್ರೇಗೌಡ ಹಾಗೂ ಟಿ.ಆರ್.ಅಶ್ವತ್ಥ ನಾರಾಯಣಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಉತ್ತರ ಕರ್ನಾಟಕ ವ್ಯಾಪ್ತಿಯ ರಾಜ್ಯ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಎಸ್.ರುದ್ರೇಗೌಡ ಅವರಿಗೆ ಪ್ರಖ್ಯಾತ ಕೈಗಾರಿಕೋದ್ಯಮಿ ಹಾಗೂ ಟಿ.ಆರ್.ಅಶ್ವತ್ಥ್ ನಾರಾಯಣಶೆಟ್ಟಿ ಅವರಿಗೆ ಪ್ರಖ್ಯಾತ ವರ್ತಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಟ್ಟಿಮನಿ ಸಂಸ್ಥಾನ ಹಿರೇಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉತ್ತರ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ರಾಜ್ಯಮಟ್ಟದ ಸಮ್ಮೇಳನವನ್ನು ಸಂಸದ ಭಗವಂತ್ ಕೂಬಾ ಉದ್ಘಾಟಿಸಿದರು. ಕಲಬುರಗಿ ವಿಧಾನ ಪರಿಷತ್ ಶಾಸಕ ಬಿ.ಜಿ.ಪಾಟೀಲ್ ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಎಸ್.ಮಾನಕರ್ ಮಾತನಾಡಿ, ಉತ್ತರ ಕರ್ನಾಟಕದ ಉದ್ಯಮಿಗಳು ಹಾಗೂ ವರ್ತಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಹಾಗೂ ಟ್ರೇಡ್ ಲೈಸೆನ್ಸ್ ಸಮಸ್ಯೆ ಪರಿಹರಿಸಿಕೊಡುವಂತೆ ಮನವಿ ಮಾಡಿದರು. ಕಲ್ಯಾಣ ಕರ್ನಾಟಕ ಭಾಗಕ್ಕೆ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಸಂಸದ ಭಗವಂತ್ ಖುಬಾ ಅವರ ಗಮನಕ್ಕೆ ತಂದರು.
ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಶರಣಬಸಪ್ಪ ಎಸ್.ಪಪ್ಪ, ಮಹಾದೇವ ವಿ ಖೇಣಿ, ಉಪಾಧ್ಯಕ್ಷರು, ಎಂ.ಸಿ. ಸದಸ್ಯರು, ಕಲ್ಯಾಣ ಕರ್ನಾಟಕದ ಉದ್ಯಮಿಗಳು, ವರ್ತಕರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಪ್ರತಿನಿಧಿಗಳು ಆಗಮಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/