ಶ್ರೀ ಮಾರಿಕಾಂಬಾ ಜಾತ್ರೆ ಪ್ರಯುಕ್ತ ದೇವಿಯ ಭಾವಚಿತ್ರದ 2023ರ ಕ್ಯಾಲೆಂಡರ್ ಬಿಡುಗಡೆ

ಶಿವಮೊಗ್ಗ | 27 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯ ಪ್ರಯುಕ್ತ 2023ನೇ ಸಾಲಿನ ಕ್ಯಾಲೆಂಡರ್ನ್ನು ಶ್ರೀ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಬಿಡುಗಡೆಗೊಳಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಮಾತನಾಡಿ, ಸಾಗರದ ಶ್ರೀ ಮಾರಿಕಾಂಬ ಜಾತ್ರೆಯ ಧಾರ್ಮಿಕ ಕಾರ್ಯ ಆರಂಭಗೊಂಡಿದ್ದು, ಲಕ್ಷಾಂತರ ಜನರು ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರಸಭೆ ವತಿಯಿಂದ ಜಾತ್ರೆಯ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಸ್ವಚ್ಛತೆ, ಕುಡಿಯುವ ನೀರು ಪೂರೈಕೆ ಸೇರಿ ಎಲ್ಲ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾತನಾಡಿ, ಜಾತ್ರೆಗೆ ಸಮಿತಿಯು ಎಲ್ಲ ರೀತಿಯ ಸಿದ್ಧತೆ ನಡೆಸಿದ್ದು, ಶ್ರೀ ಮಾರಿಕಾಂಬಾ ದೇವಿಯ ಫೋಟೋದೊಂದಿಗೆ 2023ರ ಕ್ಯಾಲೆಂಡರ್ ತಯಾರಿಸಲಾಗಿದೆ. ಸಾರ್ವಜನಿಕರು ಜಾತ್ರೆಯ ಯಶಸ್ಸಿಗೆ ಸಹಕರಿಸಬೇಕು ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ನಗರಸಭೆ ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಲಲಿತಮ್ಮ, ಭಾವನಾ ಸಂತೋಷ್, ಲಿಂಗರಾಜು, ಸವಿತಾ ವಾಸು, ಉಷಾ ಗುರುಮೂರ್ತಿ, ರಾಮು, ಪ್ರಮುಖರಾದ ಐ.ಎನ್.ಸುರೇಶಬಾಬು, ಪೋತರಾಜ ರವಿ ಪೂಜಾರ್, ಸಾಗರದ ಶ್ರೀ ಮಾರಿಕಾಂಬ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಉಪಾಧ್ಯಕ್ಷ ಸುಂದರ್ಸಿಂಗ್, ರಾಮಪ್ಪ, ಎಂ.ಡಿ.ಆನಂದ್, ವಿ.ಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರರಾವ್, ಸಹ ಕಾರ್ಯದರ್ಶಿ ಎಸ್.ವಿ.ಕೃಷ್ಣಮೂರ್ತಿ, ಖಜಾಂಚಿ ನಾಗೇಂದ್ರ ಕುಮಟ, ವಿವಿಧ ಸಮಿತಿಯ ಸಂಚಾಲಕರು, ಸಹ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu