ಮತದಾರರ ಪಟ್ಟಿ ಪರಿಷ್ಕರಣೆ, ಅಧಿಕೃತ ಸರ್ಕಾರಿ ನೌಕರರಿಗೆ ಮಾತ್ರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ
ಶಿವಮೊಗ್ಗ | 22 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ ಸಮೀಕ್ಷೆ ಕಾರ್ಯಕ್ರಮಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ, ಎನ್‍ಜಿಓ ಅಥವಾ ಯಾವುದೇ ವ್ಯಕ್ತಿಯನ್ನು ನಿಯೋಜಿಸಲಾಗಿಲ್ಲ. ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನಿಯೋಜಿಸಿದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳಿಂದ ಮಾತ್ರ ಸಂಗ್ರಹಿಸಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಯಾವುದೇ ವ್ಯಕ್ತಿ, ಎನ್‍ಜಿಓ, ಖಾಸಗಿ ಸಂಸ್ಥೆ, ಕಂಪನಿ, ಟ್ರಸ್ಟ್‍ಗಳು ಸಾರ್ವಜನಿಕರಿಂದ ಅವರ ಖಾಸಗಿ ಅಥವಾ ಯಾವುದೇ ರೀತಿ ದತ್ತಾಂಶಗಳನ್ನು ಯಾವುದೇ ರೀತಿಯಲ್ಲಿ ಸಂಗ್ರಹಿಸುವುದರಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಅವರ ವಿರುದ್ದ ಸಕ್ಷಮ ಶಾಸನದ ಪ್ರಕಾರ ಮತ್ತು ಅವಶ್ಯವಿದ್ದಲ್ಲಿ ಐಪಿಸಿ ಸೆಕ್ಷನ್ 188 ರಡಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಈ ರೀತಿಯ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಟೋಲ್‍ಫ್ರೀ ಸಂಖ್ಯೆ 1950 ಮೂಲಕ ಜಿಲ್ಲಾಡಳಿತಕ್ಕೆ ದೂರು ನೀಡಬಹುದು. ಸಾರ್ವಜನಿಕರು ಶಾಸನಬದ್ಧ ನಮೂನೆಗಳು ಮತ್ತು ಭಾರತೀಯ ಚುನಾವಣಾ ಆಯೋಗದ ಅರ್ಜಿಗಳಲ್ಲಿ ಮಾತ್ರ ಜಿಲ್ಲಾಡಳಿತದಿಂದ ನಿಯೋಜಿತರಾದ ಅಧಿಕಾರಿಗಳಿಗೆ, ಅಧಿಕೃತ ಬೂತ್ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/