ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗ ಮೇಳ ಡಿಸೆಂಬರ್ 13ಕ್ಕೆ

ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗ ಮೇಳ ಡಿಸೆಂಬರ್ 13ಕ್ಕೆ

ಶಿವಮೊಗ್ಗ | 9 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಡಿಸೆಂಬರ್‌ 13ರ ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ 2022 ಆಯೋಜಿಸಲಾಗಿದೆ. ಸರ್ವರಿಗೂ ಉದ್ಯೋಗ ಶೀರ್ಷಿಕೆಯಡಿ ಉದ್ಯೋಗ ಮೇಳ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್‌ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಡಿಸೆಂಬರ್‌ 13ರಂದು ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ.

7ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಶಿಕ್ಷಣ ಪೂರೈಸಿರುವ, ಶಿವಮೊಗ್ಗ, ಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಉದ್ಯೋಗ ಆಕಾಂಕ್ಷಿಗಳು ಲಿಂಕ್‌ ಮುಖಾಂತರ ಆನ್‌ ಲೈನ್‌ ನೋಂದಣಿ ಮಾಡಿಕೊಳ್ಳಬೇಕು. ಉದ್ಯೋಗ ಆಕಾಂಕ್ಷಿಗಳು ಕನಿಷ್ಠ 10 ರೆಸ್ಯೂಮ್‌ ಪ್ರತಿ ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ತರಬೇಕು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಲಿಂಕ್‌http://skillconnect.kaushalkar.com/candidatereg  ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು. ಮಾಹಿತಿಗೆ 08182255294, ಮೊಬೈಲ್‌ ಸಂಖ್ಯೆ 8197176710, 9019485688 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್‌.ಎಂ.ಸುರೇಶ್‌ ಹೇಳಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!