8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ಜನವರಿ 21 ಹಾಗೂ 22ರ ಸಂಜೆ 5ಕ್ಕೆ

8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ಜನವರಿ 21 ಹಾಗೂ 22ರ ಸಂಜೆ 5ಕ್ಕೆ

ಸಾಗರ | 20 ಜನವರಿ 2023 | ಡಿಜಿ ಮಲೆನಾಡು.ಕಾಂ

ಪರಿಣಿತಿ ಕಲಾಕೇಂದ್ರದ 8ನೇ ವರ್ಷದ ಸಂಭ್ರಮದ ಪ್ರಯುಕ್ತ ಸಾಗರದ ಗಾಂಧಿ ಮೈದಾನದಲ್ಲಿ ಜನವರಿ 21 ಹಾಗೂ 22ರ ಸಂಜೆ 5ಕ್ಕೆ “8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ 2023” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಸಾಗರ ನಗರದ ಗಾಂಧಿ ಮೈದಾನದಲ್ಲಿ ಜನವರಿ 21ರ ಸಂಜೆ 5ಕ್ಕೆ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ ಅವರು “8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ 2023” ಉದ್ಘಾಟಿಸುವರು. ಪರಿಣಿತಿ ಕಲಾಕೇಂದ್ರದ ಗೌರವಾಧ್ಯಕ್ಷೆ ವೀಣಾ ಬೆಳೆಯೂರು ಅಧ್ಯಕ್ಷತೆ ವಹಿಸುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಎನ್ ಛಲವಾದಿ, ಇಲಾಖೆ ಸಹಾಯಕ ನಿರ್ದೇಶಕ ಉಮೇಶ್.ಎಚ್., ಉದ್ಯಮಿ ಟಿ.ವಿ.ಪಾಂಡುರಂಗ, ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಕೆ.ಸಿದ್ದಪ್ಪ, ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ನಗರಸಭೆ ಸದಸ್ಯ ಟಿ.ಡಿ.ಮೇಘರಾಜ ಪಾಲ್ಗೊಳ್ಳುವರು.

ಎಲ್.ಬಿ. ಎಸ್.ಬಿ.ಎಸ್ ಕಾಲೇಜಿನ ಪ್ರಾಚಾರ್ಯ ಡಾ. ಲಕ್ಷ್ಮೀಶ ಎ.ಎಸ್, ಉದ್ಯಮಿ ಎಸ್.ಡಿ.ವೀರಪ್ಪ, ಆರಗ ಚಂದ್ರಶೇಖರ್, ನಗರಸಭೆ ಉಪಾಧ್ಯಕ್ಷ ವಿ.ಮಹೇಶ್, ಸದಸ್ಯರಾದ ಅರವಿಂದ ರಾಯ್ಕರ್, ಗಣೇಶ್ ಪ್ರಸಾದ್, ತುಕರಾಮ್ ಉಪಸ್ಥಿತರಿರುವರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಾಗರ ನಗರದ ಗಾಂಧಿ ಮೈದಾನದಲ್ಲಿ ಜನವರಿ 22ರ ಸಂಜೆ 5ಕ್ಕೆ ಸಮಾರೋಪ ನಡೆಯಲಿದೆ. ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸುವರು. ಹೈಕೋರ್ಟ್ ಹಿರಿಯ ವಕೀಲ ಕೆ.ದಿವಾಕರ್, ಭಾರತೀಯ ವಿದ್ಯಾಭವನ ಜಂಟಿ ನಿರ್ದೇಶಕ ವೇಣುಗೋಪಾಲ್, ವಿಠ್ಠಲ್ ಪೈ ಹೆಗ್ಗೋಡು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಎರಡು ದಿನ ಆಯೋಜಿಸಿರುವ 8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ 2023 ಕಾರ್ಯಕ್ರಮದಲ್ಲಿ ಸಾಗರ ಬಳಸಗೋಡಿನ ನಮನ ಎಸ್ ಅವರಿಂದ ಯೋಗ ಪ್ರದರ್ಶನ ನಡೆಯಲಿದೆ. ಬೆಂಗಳೂರು, ಕೇರಳ, ಪಶ್ಚಿಮ ಬಂಗಾಳ, ಮಲೇಷಿಯಾ ಸೇರಿ ವಿವಿಧೆಡೆಯಿಂದ ಕಲಾವಿದರು ನೃತ್ಯ ಸಂಗೀತೋತ್ಸವದಲ್ಲಿ ಪಾಲ್ಗೊಳ್ಳುವರು ಎಂದು ಪರಿಣಿತಿ ಕಲಾಕೇಂದ್ರದ ವಿದ್ವಾನ್ ಎಂ.ಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!