ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ದೇಶ ಉತ್ತಮ ಸಾಧನೆ
ಶಿವಮೊಗ್ಗ | 24 ಜನವರಿ 2023 | ಡಿಜಿ ಮಲೆನಾಡು.ಕಾಂ
ಬಾಹ್ಯಾಕಾಶ ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಭಾರತ ದೇಶ ಉತ್ತಮ ಸಾಧನೆ ಮಾಡಿ ಮುನ್ನಡೆಯುತ್ತಿದೆ ಎಂದು ಪದ್ಮಭೂಷಣ ಪುರಸ್ಕೃತ, ವಿಜ್ಞಾನಿ ಡಾ. ಬಿ.ಎನ್.ಸುರೇಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಉಪನ್ಯಾಸ ಮಾಲಿಕೆ 9 ರಲ್ಲಿ ‘ರಾಷ್ಟ್ರಕ್ಕೆ ಬಾಹ್ಯಾಕಾಶ ತಂತ್ರಜ್ಞಾನದ ಕೊಡುಗೆ : ಅಂದು, ಇಂದು, ಮುಂದು’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಪ್ರಸ್ತುತ ಭಾರತ 58 ಉಪಗ್ರಹಗಳನ್ನು ನಿರ್ಮಾಣ ಮಾಡಿದ್ದು, ರೆಡಿಯೋ ಆವರ್ತನ ಸಂಕೇತಗಳ ಮೂಲಕ ಹಾಸನ ಮತ್ತು ಬೆಂಗಳೂರಿನಲ್ಲಿ ಮುಖ್ಯ ನಿಯಂತ್ರಣಾ ವ್ಯವಸ್ಥೆ ರೂಪಿಸಲಾಗಿದೆ. ಭವಿಷ್ಯದ ಸಾಧನೆಯಲ್ಲಿ ಸ್ಟಾರ್ ಲಿಂಕ್ ಯೋಜನೆಯ ಮೂಲಕ ಉತ್ಕೃಷ್ಟ ಗುಣಮಟ್ಟದ ನಲವತ್ತು ಸಾವಿರ ಉಪಗ್ರಹಗಳನ್ನು, 560 ಕಿಲೋಮೀಟರ್ ಕಕ್ಷೆಯಲ್ಲಿ ಸ್ಥಾಪಿಸಲಾಗುವುದು. ಇದರಿಂದ ಅತ್ಯುತ್ತಮ ವೇಗದ ಇಂಟರ್ನೆಟ್ ಸಂಪರ್ಕದೊಂದಿಗೆ ಅಗತ್ಯ ಸೇವೆಗಳನ್ನು ಪೂರೈಸಬಹುದಾಗಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಭೂಮಿಯ ಫಲವತ್ತತೆ, ನೀರಿನ ಅಂಶ, ಮೀನುಗಾರಿಕೆ, ವನ ಸಂರಕ್ಷಣೆ, ನಗರ ಯೋಜನೆಗಳಂತಹ ಸೂಕ್ಷ್ಮ ವಿಚಾರಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಮಾಹಿತಿ ಪಡೆಯಲು ಹಾಗೂ ನಿರ್ವಹಿಸಲು ಸಾಧ್ಯವಾಗಿದೆ ಎಂದರು.
ಹೂವು ನೀಡಿ ಸ್ವಾಗತಿಸಿದ ರೋಬೊ : ಎಸ್.ಆರ್.ಎನ್.ಎಂ ಕಾಲೇಜಿನ ವಿದ್ಯಾರ್ಥಿಗಳೇ ನಿರ್ಮಿಸಿದ ರೋಬೊ ವೇದಿಕೆಯ ಮೇಲಿದ್ದ ಅತಿಥಿಗಳಿಗೆ ಹೂವು ನೀಡಿ ಸ್ವಾಗತಿಸಿತು. ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅತಿಥಿಗಳನ್ನು ಸ್ವಾಗತಿಸುವ ವೇಳೆ ಬಂದ ರೋಬೊ ಗುಲಾಬಿ ಹೂವು ನೀಡಿ ಸ್ವಾಗತಿಸಿದ್ದು ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು.
ಎನ್.ಇ.ಎಸ್ ಅಧ್ಯಕ್ಷ ಜಿ.ಎಸ್.ನಾರಾಯಣರಾವ್, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಉಪಾಧ್ಯಕ್ಷ ಸಿ.ಆರ್.ನಾಗರಾಜ, ಖಜಾಂಚಿ ಡಿ.ಜಿ.ರಮೇಶ್, ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ.ಕೆ.ಎಲ್.ಅರವಿಂದ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu