ಶಿವಮೊಗ್ಗ ವಿಮಾನ ನಿಲ್ದಾಣದ ಆವರಣದೊಳಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
ಶಿವಮೊಗ್ಗ | 27 ಜನವರಿ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಹೊರ ವಲಯ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳಿಗೆ ತೊಡಕಾಗದಂತೆ ಸಾರ್ವಜನಿಕರ ಪ್ರವೇಶವನ್ನು ಉದ್ಘಾಟನೆ ಆಗುವವರೆಗೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ನೂತನ ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನರು ಆಗಮಿಸಿ, ರನ್ವೇಯಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu