ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 400 ಕಿ.ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಲೋಕಾರ್ಪಣೆ

ಶಿವಮೊಗ್ಗ | 26 ಜನವರಿ 2023 | ಡಿಜಿ ಮಲೆನಾಡು.ಕಾಂ
ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಪ್ರಯುಕ್ತ ಜೆ.ಎನ್ ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ 400 ಕಿ.ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕವನ್ನು ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಲೋಕಾರ್ಪಣೆಗೊಳಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಓದಿನ ಜೊತೆಗೆ ನಾವೀನ್ಯ ಪ್ರಯೋಗಗಳ ಅವಶ್ಯಕತೆಯಿದೆ. ವಿದ್ಯಾಸಂಸ್ಥೆಗಳು ಹೊಸ ಪ್ರಯೋಗಗಳಿಗೆ ಅವಕಾಶ ಕಲ್ಪಿಸುವ ಪೂರಕ ವೇದಿಕೆಗಳನ್ನು ನಿರ್ಮಾಣ ಮಾಡಬೇಕು. ಸಾಮಾಜಿಕ ಸಂಶೋಧನಾ ಪ್ರಯೋಗಗಳು ಸಮಾಜದ ಉನ್ನತಿಗೆ ಅವಶ್ಯಕ ವಿಚಾರವಾಗಿದೆ. ಸಂಶೋಧನಾ ಪ್ರಕ್ರಿಯೆಗಳಿಗೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಮಲೆನಾಡಿನ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ( ಎನ್ಇಎಸ್ ) ನೀಡಿದ ಕೊಡುಗೆ ಅವಿಸ್ಮರಣೀಯ. ಶಿವಮೊಗ್ಗ ಜಿಲ್ಲೆ ಉದ್ಯಮ, ಪ್ರವಾಸೋದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಶೀಘ್ರದಲ್ಲೇ ವಿಮಾನ ನಿಲ್ದಾಣ ಲೋಕಾರ್ಪಣೆಯಾಗುತ್ತಿದೆ ಎಂದು ತಿಳಿಸಿದರು.
ಪರಿಸರ ಸ್ನೇಹಿ ವಿದ್ಯುತ್ ಘಟಕ: ಎನ್.ಇ.ಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಎರಡು ಕೋಟಿ ವೆಚ್ಚದಲ್ಲಿ ಸ್ಥಾಪಿಸಿರುವ 400 ಕಿಲೊವ್ಯಾಟ್ ಉತ್ಪಾದಿಸುವ ಸೌರ ವಿದ್ಯುತ್ ಘಟಕವು ಸಂಪೂರ್ಣ ಪರಿಸರ ಸ್ನೇಹಿಯಾಗಿದೆ ಎಂದು ತಿಳಿಸಿದರು. ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಶ್ರಮಿಸಿದ ಎನ್.ಇ.ಎಸ್ ಮಾಜಿ ಅಧ್ಯಕ್ಷ ಎ.ಎಸ್.ವಿಶ್ವನಾಥ, ನಿವೃತ್ತ ಉಪಪ್ರಾಚಾರ್ಯ ಡಾ.ಎಲ್.ಕೆ.ಶ್ರೀಪತಿ, ಪ್ರಾಧ್ಯಾಪಕ ಡಾ.ಅಜ್ಜಣ್ಣ, ಟಾಟಾ ಕಂಪನಿಯ ದರ್ಶನ್ ಅವರನ್ನು ಸನ್ಮಾನಿಸಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯ ವಿಶ್ವಾಸ್, ಎನ್‌ಇಎಸ್ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಸೀತಾಲಕ್ಷ್ಮೀ, ಪ್ರಾಚಾರ್ಯ ಡಾ.ಕೆ.ನಾಗೇಂದ್ರಪ್ರಸಾದ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu