ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಕಾಲದಲ್ಲಿ ತಪಾಸಣೆ ಅಗತ್ಯ
ಶಿವಮೊಗ್ಗ | 31 ಜನವರಿ 2023 | ಡಿಜಿ ಮಲೆನಾಡು.ಕಾಂ
ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸುತ್ತಿರಬೇಕು ಎಂದು ವೈದ್ಯ ಡಾ. ವರುಣ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ಹೊಸೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಸಂಗಮ್ ಹೆಲ್ತ್ ಕೇರ್ ಆಯುರ್ವೇದ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತಿಚೀನ ಜೀವನಶೈಲಿ ಹಾಗೂ ಹವಮಾನ ಬದಲಾವಣೆಯಿಂದ ಪ್ರತಿಯೊಬ್ಬರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಆರೋಗ್ಯದ ಬಗ್ಗೆ ತಪಾಸಣೆ ಮಾಡಿಸಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಆರೋಗ್ಯ ಅತ್ಯಂತ ಮುಖ್ಯ. ಆರೋಗ್ಯ ಸಂಪತ್ತಿಗಿಂತ ಬೇರೆ ಸಂಪತ್ತಿಲ್ಲ. ಆರೋಗ್ಯ ಉತ್ತಮವಾಗಿ ಇಟ್ಟುಕೊಳ್ಳುವ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ರೋಟರಿ ಸಂಸ್ಥೆಯ ಕ್ಲಬ್‌ಗಳು ಉತ್ತಮ ಕೆಲಸ ಮಾಡುತ್ತಿದ್ದು, ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆ ನೀಡಿ ಸೇವಾ ಚಟುವಟಿಕೆಗಳನ್ನು ನಡೆಸುತ್ತಿವೆ. ಆರೋಗ್ಯದ ಶಿಬಿರದ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯ ನಡೆಸುತ್ತಿದೆ ಎಂದು ಹೇಳಿದರು.
ಶಿವಮೊಗ್ಗ ತಾಲೂಕು ಆಯನೂರು ಗ್ರಾಪಂ ಹೊಸೂರು ಗ್ರಾಮದಲ್ಲಿ 300ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸಿ ಔಷಧ ವಿತರಿಸಲಾಯಿತು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ್, ಸಂತೋಷ್, ಮಂಜುನಾಥ್ ಕದಂ, ಅರುಣ್ ದೀಕ್ಷಿತ್, ಪ್ರಜ್ವಲ್, ಅಣ್ಣಪ್ಪ.ಆರ್, ಶರತ್ ಮೋಹನ್, ಮಾರುತಿ, ಪ್ರಕಾಶ್, ಹೊಸೂರಪ್ಪ, ಡಾ. ವರುಣ್ ಮತ್ತು ತಜ್ಞ ವೈದ್ಯರ ತಂಡ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu