ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಲು ಸಲಹೆ
ಶಿವಮೊಗ್ಗ | 5 ಜನವರಿ 2023 | ಡಿಜಿ ಮಲೆನಾಡು.ಕಾಂ
ಅನಾರೋಗ್ಯ ಕಂಡುಬಂದಲ್ಲಿ ಸಕಾಲದಲ್ಲಿ ತಪಾಸಣೆ ಮಾಡಿಸಿದರೆ ಉತ್ತಮವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮಕ್ಕಳ ಆರೋಗ್ಯದ ಕಡೆಗೆ ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು. ಸಣ್ಣ ಪುಟ್ಟ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯ ಸಹಕಾರದಲ್ಲಿ ಆಯೋಜಿಸಿದ್ದ 6ರಿಂದ 18 ವರ್ಷದೊಳಗಿನ ವಿಕಲಚೇತನ ಮಕ್ಕಳ ವೈದ್ಯಕೀಯ ಮೌಲ್ಯಾಂಕ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಆರೋಗ್ಯವಂತರಾಗಿ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳು ದೇಶದ ಆಸ್ತಿ ಎಂದು ತಿಳಿಸಿದರು.
ವಿಕಲಚೇತನ ಮಕ್ಕಳಿಗೆ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಉಪಕರಣ ಅಗತ್ಯವಿರುವ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ನಿರಂತರವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ವಿಶೇಷ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಪೋಷಕರು, ಮಕ್ಕಳು ಹಾಗೂ ಸಾರ್ವಜನಿಕರಿಗೆ ಅನುಕೂಲ ಒದಗಿಸುವ ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ಕುಮಾರ್, ಕಾರ್ಯದರ್ಶಿ ಕುಮಾರಸ್ವಾಮಿ, ಜಿಲ್ಲಾ ಸೇವಾದಳ ಅಧ್ಯಕ್ಷ ವೈ.ಎಚ್.ನಾಗರಾಜ, ಇನ್ನರ್ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್, ಬಿಂದು ವಿಜಯಕುಮಾರ್, ಶ್ವೇತಾ ಅಶಿತ್, ಮಂಜಯ್ಯ, ರುದ್ರೇಶ್, ಸಂಗಣ್ಣ, ಧನಂಜಯ, ರೇಖಾ, ಗಂಗಮ್ಮ, ಮೆಗ್ಗಾನ್ ಆಸ್ಪತ್ರೆಯ ವೈದ್ಯರು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು. 450ಕ್ಕೂ ಹೆಚ್ಚು ವಿಕಲಚೇತನ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu