ಬಾಹ್ಯಾಕಾಶ ವಿಜ್ಞಾನಿ ಡಾ. ಬಿ.ಎನ್.ಸುರೇಶ್ ಉಪನ್ಯಾಸ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಕಾರ್ಯಕ್ರಮ
ಶಿವಮೊಗ್ಗ | 20 ಜನವರಿ 2023 | ಡಿಜಿ ಮಲೆನಾಡು.ಕಾಂ
ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ ಮಾಲಿಕೆ ಹಾಗೂ ಸಂವಾದ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಆಯೋಜಿಸಲಾಗುತ್ತಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಶಿವಮೊಗ್ಗ ನಗರದಲ್ಲಿ 1946ರಲ್ಲಿ ಆರಂಭಗೊಂಡ ರಾಷ್ಟ್ರೀಯ ಶಿಕ್ಷಣ ಸಮಿತಿಯಡಿ ಪ್ರಸ್ತುತ 36 ಶಾಲಾ ಕಾಲೇಜುಗಳು ನಡೆಯುತ್ತಿದ್ದು, 18 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. 1800ಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಮೃತ ಮಹೋತ್ಸವ ಉಪನ್ಯಾಸ ಮಾಲಿಕೆ 9 ಅನ್ನು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜನವರಿ 23ರ ಬೆಳಗ್ಗೆ 11ಕ್ಕೆ ಆಯೋಜಿಸಲಾಗಿದೆ. ಬಾಹ್ಯಾಕಾಶ ವಿಜ್ಞಾನಿ, ಪದ್ಮಭೂಷಣ ಪುರಸ್ಕೃತ ಡಾ. ಬಿ.ಎನ್.ಸುರೇಶ್ ಅವರು “ರಾಷ್ಟ್ರಕ್ಕೆ ಬಾಹ್ಯಾಕಾಶ ತಂತ್ರಜ್ಞಾನದ ಕೊಡುಗೆ : ಅಂದು, ಇಂದು ಮತ್ತು ಮುಂದು” ವಿಷಯ ಕುರಿತು ಉಪನ್ಯಾಸ ನೀಡುವರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಲಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಅಧ್ಯಕ್ಷತೆ ವಹಿಸುವರು. ಎನ್‌ಇಎಸ್ ಉಪಾಧ್ಯಕ್ಷ ಸಿ.ಆರ್.ನಾಗರಾಜ್, ಸಹ ಕಾರ್ಯದರ್ಶಿ ಡಾ ಪಿ.ನಾರಾಯಣ, ಖಜಾಂಚಿ ಡಿ.ಜಿ.ರಮೇಶ್ ಉಪಸ್ಥಿತರಿರುವರು ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜನವರಿ 30ರ ಸೋಮವಾರ ಬೆಳಗ್ಗೆ 11ಕ್ಕೆ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸರ್ವೋದಯ ಮಂಡಲದ ಸಂಯುಕ್ತ ಆಶ್ರಯದಲ್ಲಿ ಸರ್ವೋದಯ ದಿನಾಚರಣೆ ಮತ್ತು ಕರ್ನಾಟಕ ರಾಜ್ಯ ಸಮಾವೇಶ ಏರ್ಪಡಿಸಲಾಗಿದೆ. ಮೇಲುಕೋಟೆ ಜನಪದ ಸೇವಾ ಟ್ರಸ್ಟ್‌ನ ಸುಮನಸ ಕೌಲಗಿ ದಿಕ್ಸೂಚಿ ಭಾಷಣ ಮಾಡುವರು ಎಂದು ತಿಳಿಸಿದರು.
ಎನ್‌ಇಎಸ್ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ, ಖಜಾಂಚಿ ಡಿ.ಜಿ.ರಮೇಶ್, ಪ್ರೊ. ಎನ್.ಕೆ.ಹರಿಯಪ್ಪ, ಡಾ. ಕೆ.ನಾಗೇಂದ್ರ, ಡಾ. ಎಚ್.ಎಸ್.ನಾಗಭೂಷಣ, ಡಾ. ಕೆ.ಅರವಿಂದ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu