ಸಾರ್ವಜನಿಕರಿಗೆ ಸರ್ಕಾರದ ಆರ್ಥಿಕ ಯೋಜನೆಗಳ ಪ್ರಯೋಜನ ತಲುಪಿಸಲು ಜಿಲ್ಲಾಧಿಕಾರಿ ಸೂಚನೆ
ಶಿವಮೊಗ್ಗ | 4 ಜನವರಿ 2023 | ಡಿಜಿ ಮಲೆನಾಡು.ಕಾಂ
ಸರ್ಕಾರದ ಆರ್ಥಿಕ ಸೌಲಭ್ಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಬ್ಯಾಂಕ್ ಹಾಗೂ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇರುವುದರಿಂದ ಸಾಲ ಸೌಲಭ್ಯಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ. ಇನ್ಮುಂದೆ ವಿಳಂಬ ಮಾಡದೇ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ ಹಾಗೂ ಮಾರ್ಗದರ್ಶಿ ಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬ್ಯಾಂಕ್ ಪ್ರತಿನಿಧಿಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳ ಅನುಷ್ಠಾನ ಮಾರ್ಗಸೂಚಿಯಲ್ಲಿ ಕಾಲ ಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ. ಬ್ಯಾಂಕ್ ಸಿಬ್ಬಂದಿಗಳಿಗೆ ಮಾರ್ಗಸೂಚಿಯ ಮಾಹಿತಿ ಕೊರತೆ ಕಾರಣದಿಂದ ಸಾರ್ವಜನಿಕರ ಅರ್ಜಿಗಳು ಸಮಯಕ್ಕೆ ಸರಿಯಾಗಿ ವಿಲೇ ಆಗುವುದಿಲ್ಲ. ಇದರಿಂದ ಸರ್ಕಾರದ ಯೋಜನೆ ಜನರಿಗೆ ತಲುಪುವುದಿಲ್ಲ. ಆರ್ಥಿಕ ಸೌಲಭ್ಯ ನೀಡಲು ಅಗತ್ಯವಿರುವ ದಾಖಲೆಗಳ ಸ್ಪಷ್ಟ ಮಾಹಿತಿ ಎಲ್ಲ ಬ್ಯಾಂಕ್ ಅಧಿಕಾರಿಗಳಿಗೆ ಇರಬೇಕು. ಇದರಿಂದ ಅರ್ಜಿಗಳ ಶೀಘ್ರ ವಿಲೇವಾರಿ ಸಾಧ್ಯ ಎಂದು ತಿಳಿಸಿದರು.
ಬ್ಯಾಂಕ್ ಪ್ರತಿನಿಧಿಗಳ ತರಬೇತಿಯು ಸೀಮಿತ ಆಗಬಾರದು. ಇಲ್ಲಿ ತರಬೇತಿ ಪಡೆದ ಅಧಿಕಾರಿಗಳು ಮಾಹಿತಿಯನ್ನು ನಿಮ್ಮ ಶಾಖೆಗೆ ಮಾತ್ರ ಸೀಮಿತ ಮಾಡಬಾರದು. ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು ತರಬೇತಿಯ ಸಂಪೂರ್ಣ ಮಾಹಿತಿಯನ್ನು ನಿಮ್ಮ ಬ್ಯಾಂಕ್‌ಗಳ ಜಿಲ್ಲೆಯ ಎಲ್ಲ ಶಾಖೆಗಳಿಗೂ ತಲುಪಿಸಬೇಕು. ಇದರಿಂದ ಜಿಲ್ಲೆಯ ಪ್ರಗತಿಯು ಉತ್ತಮವಾಗುತ್ತದೆ. ಬಾಕಿ ಇರುವ ಅರ್ಜಿಗಳ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್ ಮಾತನಾಡಿ, ಇಲಾಖೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಬ್ಯಾಂಕ್‌ಗಳ ಸಹಕಾರ ಬಹಳ ಮುಖ್ಯ ಆಗಿರುತ್ತದೆ. ಯೋಜನೆಗಳ ಮುಖಾಂತರ ಸಾಲಸೌಲಭ್ಯ ನೀಡಲು ಅಗತ್ಯವಿರುವ ಸಂಪೂರ್ಣ ಸಹಕಾರವನ್ನು ಇಲಾಖೆ ನೀಡುತ್ತದೆ. ಬ್ಯಾಂಕ್ ಪ್ರತಿನಿಧಿಗಳು ಸಹ ಸಾರ್ವಜನಿಕರಿಗೆ ಹೆಚ್ಚಿನ ನೆರವು ನೀಡಲು ಪೂರಕ ಕ್ರಮಗಳನ್ನು ಬ್ಯಾಂಕ್‌ಗಳಲ್ಲಿ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮೂಕಪ್ಪ ಕರಭೀಮಣ್ಣನವರ್, ನಬಾರ್ಡ್ ಡಿಡಿಎಂ ರವಿ, ಕೆನರಾ ಬ್ಯಾಂಕ್ ಡಿಜಿಎಂ ಸಂದೀಪ್ ರಾವ್, ಮ್ಯಾನೇಜರ್ ಯತೀಶ್, ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ, ಸಮನ್ವಯ ಕಾಶಿ, ವಿವಿಧ ಬ್ಯಾಂಕ್‌ಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
