ಸಾಗರದ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ, ಸ್ನೇಹಿತರು ಸಾಗರದಿಂದಲೂ ಅನ್ನದಾನ

ಸಾಗರದ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ, ಸ್ನೇಹಿತರು ಸಾಗರದಿಂದಲೂ ಅನ್ನದಾನ

ಶಿವಮೊಗ್ಗ | 14 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಅತ್ಯಂತ ವೈಭವಯುತವಾಗಿ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತಿದ್ದು, ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಶ್ರೀ ಮಾರಿಕಾಂಬಾ ದೇವರ ದರ್ಶನ ಪಡೆಯುತ್ತಿದ್ದಾರೆ. ಸಾರ್ವಜನಿಕರಿಗೆ ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯಿಂದ ನಿರಂತರ ಅನ್ನ ಸಂತರ್ಪಣೆ ನಡೆಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಾಗರ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ಆರಂಭದ ಮೊದಲ ದಿನದಿಂದಲೂ ಜನರಿಗೆ ತಿಂಡಿ, ಊಟದ ವ್ಯವಸ್ಥೆ ಮಾಡಲಾಗಿದೆ. ದಿನ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಜನರು ಅನ್ನ ಸಂತರ್ಪಣೆಯಲ್ಲಿ ತಿಂಡಿ, ಊಟ ಮಾಡುತ್ತಿದ್ದಾರೆ.

ಶ್ರೀ ಮಾರಿಕಾಂಬ ಜಾತ್ರಾ ಸಮಿತಿಯಿಂದ ದಾಸೋಹ ಸಮಿತಿ ರಚಿಸಿದ್ದು, ಸಂಚಾಲಕ ವಿನಾಯಕ್ ಗುಡಿಗಾರ್, ಸಹ ಸಂಚಾಲಕ ನಿತ್ಯಾನಂದ ಶೆಟ್ಟಿ, ಭಾಸ್ಕರ್ ಆಚಾರ್ ಸೇರಿದಂತೆ 15-20 ಜನರ ತಂಡ ಅನ್ನ ಸಂತರ್ಪಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಅಡುಗೆ ಭಟ್ಟರು ಹಾಗೂ ಸೇವಾ ಕಾರ್ಯಕರ್ತರು ದಾಸೋಹ ಕಾರ್ಯದಲ್ಲಿ ಸೇವೆ ಮಾಡುತ್ತಿದ್ದಾರೆ.

ಮಾರಿಕಾಂಬಾ ಜಾತ್ರೆಯ ಪ್ರಯುಕ್ತ ನಡೆಯುತ್ತಿರುವ ದಾಸೋಹ ಕಾರ್ಯವು ಪ್ರತಿ ದಿನವು ವೈವಿಧ್ಯ ತಿಂಡಿ, ಸಿಹಿ ತಿನಿಸುಗಳನ್ನು ವಿತರಿಸಲಾಗುತ್ತಿದೆ. ಬೆಳಗ್ಗೆ ತಿಂಡಿಯಲ್ಲಿ ಕೇಸರಿಬಾತ್, ಉಪ್ಪಿಟ್ಟು, ಪಲಾವ್, ಚಿತ್ರಾನ್ನ, ಪುಳಿಯೋಗರೆ, ಅವಲಕ್ಕಿ ಪುಳಿಯೋಗರೆ, ಟೀ, ಕಾಫಿ ವಿತರಿಸಲಾಗುತ್ತಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮಧ್ಯಾಹ್ನ ಹಾಗೂ ರಾತ್ರಿ ನಡೆಯುವ ಊಟದ ವ್ಯವಸ್ಥೆಯಲ್ಲಿ ಪ್ರತಿ ದಿನ ಅಡುಗೆಯಲ್ಲಿ ಸಿಹಿ ತಿನಿಸು, ಪಲ್ಯ, ಅನ್ನ ಸಾಂಬರ್, ಮಜ್ಜಿಗೆ, ಉಪ್ಪಿನಕಾಯಿ ನೀಡಲಾಗುತ್ತಿದೆ. ಊಟದ ಸಿಹಿತಿನಿಸುವಿನಲ್ಲಿ ಕೇಸರಿಬಾತ್, ಪಾಯಸ, ಗೋದಿ ಪಾಯಸ, ಮೈಸೂರು ಪಾಕ್ ಹೋಳಿಗೆ ಸೇರಿದಂತೆ ದಿನಕ್ಕೊಂದು ಸಿಹಿ ನೀಡಲಾಗುತ್ತಿದೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಯಲ್ಲಿ ದಿನಪೂರ್ತಿ ನಿಂತು ಕೆಲಸ ಮಾಡುವ ಪೊಲೀಸ್, ಹೋಂಗಾರ್ಡ್ ಸಿಬ್ಬಂದಿಗೆ ಕುಳಿತು ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಸ್ನೇಹಿತರು ಸಾಗರದಿಂದ ಅನ್ನದಾನ : ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ಸಾಗರ ಹೊಟೇಲ್ ವೃತ್ತದ ನಗರಸಭೆ ಸಂಕೀರ್ಣದಲ್ಲಿ “ಸ್ನೇಹಿತರು ಸಾಗರ” ಸಂಸ್ಥೆ ವತಿಯಿಂದಲೂ ಪ್ರತಿ ದಿನ ಮಧ್ಯಾಹ್ನ ಊಟ ಉಚಿತವಾಗಿ ವಿತರಿಸಲಾಗುತ್ತಿದೆ. ಜಾತ್ರೆಯ ಒಂಬತ್ತು ದಿನಗಳ ಕಾಲವು ಮಧ್ಯಾಹ್ನ ಊಟ ನೀಡಲಾಗುತ್ತಿದೆ. 12-13 ಜಾತ್ರೆಗಳಿಂದಲೂ ಸ್ನೇಹಿತರು ಸಾಗರ ಸಂಸ್ಥೆಯು ಸಾರ್ವಜನಿಕರಿಗೆ ಊಟ ವಿತರಿಸುವ ಕಾರ್ಯ ನಡೆಸುತ್ತಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯು ಕಲ್ಪಿಸಿದೆ. ಜಾತ್ರೆಗೆ ಆಗಮಿಸುವ ಸಾವಿರಾರು ಜನರು ನಿತ್ಯ ದಾಸೋಹದಲ್ಲಿ ಭಾಗಿಯಾಗುತ್ತಿದ್ದಾರೆ

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!