ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಜನಸಾಗರ, ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಜನಸಾಗರ, ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ಶಿವಮೊಗ್ಗ | 9 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು ಮನೆ ದೇವಸ್ಥಾನದಲ್ಲಿ ಜಮಾಯಿಸಿದ್ದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಂಗಳವಾರ ರಾತ್ರಿ 11ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ನಡೆಯಿತು. ನಂತರ ಹೆಣ್ಣು ಒಪ್ಪಿಸುವ ಧಾರ್ಮಿಕ ಪೂಜಾ ವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ನೂಕು ನುಗ್ಗಲಾಯಿತು. ಶ್ರೀ ದೇವಿಯ ದಂಡಿನ ಮೆರವಣಿಗೆಯು ಪ್ರಸಿದ್ಧ ಕಲಾತಂಡಗಳ ಪಾಲ್ಗೊಳ್ಳುವಿಕೆಯ ಜತೆಯಲ್ಲಿ ನಡೆಯಿತು. ಭಕ್ತರು ದೇವಿಯ ದರ್ಶನ ಪಡೆದರು.

ಬೆಳ್ತಂಗಡಿಯ ಸೃಷ್ಠಿ ಆರ್ಟ್ಸ್ ನ ಕಲಾವಿದರ ತಂಡ, ಕೀಲುಕುದುರೆ, ಕರಗ, ರಾಜ, ರಾಣಿ, ಸಿಂಹ ಸೇರಿದಂತೆ ವಿವಿಧ ವೇಷಧಾರಿಗಳು, ಹುಬ್ಬಳ್ಳಿಯ ಬ್ಯಾಂಡ್ ಬಳಗ, ಸಿರಸಿಯ ಮುಖೇಶ್ ಆರ್ಟ್ಸ್ ಬೇಡರ ವೇಷದ ಕಲಾವಿದರು, ಅರಸಿಕೇರೆಯ ಶ್ರೀ ರಾಮ ಯುವಕರ ಕಲಾಸಂಘದ ಸದಸ್ಯರು ಸೋಮನ ಕುಣಿತ, ನಂದಿಕೋಲು ನಡೆಸಿಕೊಟ್ಟರು.

ವಾದ್ಯಗಾರರು ಕಾಂತಾರ ಚಲನಚಿತ್ರದ ಗೀತೆಯನ್ನು ನುಡಿಸಿದರು. ಮಂಡ್ಯ ಕೆ.ಆರ್.ನಗರದ ಆದಿಶಕ್ತಿ ತಂಡವು ನಗಾರಿ, ಡೊಳ್ಳು ಕಲಾವಿದರು, ಚಂಡೆವಾದನ, ಮಂಗಳವಾದ್ಯ ಸೇರಿದಂತೆ ಮುಂತಾದ ಕಲಾತಂಡಗಳ ಸದಸ್ಯರು ರಾಜಬೀದಿ ಉತ್ಸವದಲ್ಲಿ ಭಾಗವಹಿಸಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಭವ್ಯರಥದಲ್ಲಿ ಶ್ರೀ ಮಾರಿಕಾಂಬೆಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬುಧವಾರ ಬೆಳಗ್ಗೆ ಗಂಡನ ಮನೆಗೆ ತರಲಾಯಿತು. ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಸಿದ್ಧಪಡಿಸಿದ್ದ ಬೃಹತ್ ವೇದಿಕೆಯಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಧಾರ್ಮಿಕ ಆಚರಣೆಗಳನ್ನು ನಡೆಸಲಾಯಿತು.

ಬುಧವಾರದದಿಂದ ಗಂಡನ ಮನೆ ಆವರಣದಲ್ಲಿ ಶ್ರೀ ಮಾರಿಕಾಂಬಾ ದೇವರ ದರ್ಶನಕ್ಕೆ ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಗಂಡನ ಮನೆ ದೇವಸ್ಥಾನದಲ್ಲಿ ಶ್ರೀ ದೇವಿಯ ಘಟೇವು ಪ್ರವೇಶ ನಂತರ ಮಂಗಳಾರತಿ ನಡೆಸಲಾಯಿತು. ಫೆ. 15ರವರೆಗೂ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾರಿಕಾಂಬ ಜಾತ್ರೆಯ ಎರಡನೇ ದಿನವೂ ದೇವಿಯ ದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿ ಪೂಜೆ ಸಲ್ಲಿಸಿದರು.

ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ, ಪೋತರಾಜ ರವಿ, ಉಪಾಧ್ಯಕ್ಷರು, ಸಹ ಕಾರ್ಯದರ್ಶಿ, ವಿವಿಧ ಸಮಿತಿ ಸಂಚಾಲಕರು ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!