ಸಾಗರ ಶ್ರೀ ಮಾರಿಕಾಂಬ ಜಾತ್ರೆಯ ಫೆಬ್ರವರಿ 10ರ ಕಾರ್ಯಕ್ರಮ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ನಾಳೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಸಾಗರ ಶ್ರೀ ಮಾರಿಕಾಂಬ ಜಾತ್ರೆಯ ಫೆಬ್ರವರಿ 10ರ ಕಾರ್ಯಕ್ರಮ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ನಾಳೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಶಿವಮೊಗ್ಗ | 9 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಫೆಬ್ರವರಿ 10 ರಿಂದ ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ವಿವಿಧ ರಾಜ್ಯಗಳ ಕುಸ್ತಿಪಟುಗಳು ಸಾಗರಕ್ಕೆ ಆಗಮಿಸಿ ಭಾಗವಹಿಸಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಾಗರದ ಮಾರಿಕಾಂಬಾ ಜಾತ್ರೆ ವೇಳೆಯಲ್ಲಿ ಆಯೋಜಿಸುವ ಕುಸ್ತಿ ಪಂದ್ಯಾವಳಿ ವೀಕ್ಷಿಸಲು ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರು ಆಗಮಿಸುತ್ತಾರೆ. ರಾಷ್ಟ್ರಮಟ್ಟದಲ್ಲಿ ಸಾಗರ ಜಾತ್ರೆಯ ಕುಸ್ತಿ ಪಂದ್ಯಾವಳಿ ಹೆಸರುವಾಸಿಯಾಗಿದೆ. ಮೂರು ದಿನಗಳ ಕಾಲ ಕುಸ್ತಿ ಪಂದ್ಯಾವಳಿ ನಡೆಯಲಿದೆ.

ಸಾಗರ ನಗರದ ಸಂತ ಜೋಸೆಫರ ಶಾಲೆ ಎದುರಿನ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಫೆ. 10ರ ಮಧ್ಯಾಹ್ನ 3ಕ್ಕೆ ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸುವರು. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎನ್.ಗುರುಮೂರ್ತಿ ಉಪಸ್ಥಿತರಿರುವರು.

ಸಾಗರ ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್, ನಗರಸಭೆ ಉಪಾಧ್ಯಕ್ಷ ವಿ.ಮಹೇಶ್, ಅಗ್ನಿಶಾಮಕ ದಳ ಸಹಾಯಕ ಠಾಣಾಧಿಕಾರಿ ಕೆ.ತಿಮ್ಮಪ್ಪ, ಸಿವಿಲ್ ಸರ್ಜನ್ ಪರಪ್ಪ, ಜಾತ್ರಾ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಕುಸ್ತಿ ಸಮಿತಿ ಸಂಚಾಲಕ ಎಸ್.ಅಶೋಕ್, ಸಹ ಸಂಚಾಲಕ ಎಂ.ಎಸ್.ಶಶಿಕಾಂತ್, ಜಗನ್ನಾಥ್ ಜೇಡಿಕುಣಿ ಉಪಸ್ಥಿತರಿರುವರು. ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕಲಾಸಿರಿ ಕಾರ್ಯಕ್ರಮ ಫೆ. 10 : ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಿರ್ಮಿಸಿರುವ ನಗರಸಭೆ ಆವರಣದ ಮಾರಿಕಾಂಬಾ ಕಲಾವೇದಿಕೆಯಲ್ಲಿ ಫೆ. 10ರ ಸಂಜೆ ಕಲಾಸಿರಿ ಕಾರ್ಯಕ್ರಮ ನಡೆಯಲಿದೆ. ಫೆ. 10ರ ಸಂಜೆ 5.30ರಿಂದ 6ರವರೆಗೆ ಹುಲಿದೇವರಬನದ ಕೊಡಚಾದ್ರಿ ಚಾರಿಟೇಬಲ್ ಟ್ರಸ್ಟ್ ಅವರಿಂದ ಮಲ್ಲಗಂಬ ಪ್ರದರ್ಶನ, ಸಂಜೆ 6ರಿಂದ 7ರವರೆಗೆ ಬೆಂಗಳೂರು ಅಶ್ವಿನ್ ಮೋಹನ್ ಅವರಿಂದ ಸುಗಮ ಸಂಗೀತ, 7.45ರವರೆಗೆ ಶಿವಮೊಗ್ಗ ನವಜ್ಯೋತಿ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ರಸಮಂಜರಿ, ರಾತ್ರಿ 7.45ರಿಂದ 8 ರವರೆಗೆ ಶಿಗ್ಗಾವ್ ನಟರಾಜ ನಾಟ್ಯ ಕಲಾಸಂಸ್ಥೆಯಿಂದ ಭರತನಾಟ್ಯ, 8ರಿಂದ 9.45ರವರೆಗೆ ಉಡುಪಿ ಸ್ಮಾರ್ಟ್ ಗೈಸ್ ಡ್ಯಾನ್ಸ್ ತಂಡದಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ, ನಂತರ ಮ್ಯೂಸಿಕಲ್ ಸ್ಟಾರ್ ನೈಟ್ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!