ನಿತ್ಯವೂ ಸಾವಿರಾರು ಭಕ್ತರಿಂದ ಸಾಗರದ ಶ್ರೀ ಮಾರಿಕಾಂಬಾ ದರ್ಶನ, ಜನರಿಂದ ಜಾತ್ರಾ ಖರೀದಿ ಜೋರು
ಶಿವಮೊಗ್ಗ | 14 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಪ್ರತಿ ನಿತ್ಯವೂ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಬಿಸಿಲಿನ ದಗೆ ಹೆಚ್ಚಿದ್ದರೂ ಉದ್ದದ ಸರತಿ ಸಾಲಿನಲ್ಲಿ ಗಂಟೆಗಟ್ಟಲೇ ನಿಂತು ಸಾರ್ವಜನಿಕರು ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಿಗೆ ಕುಂಕುಮಾರ್ಚನೆ, ತುಲಾಭಾರ ಸೇರಿದಂತೆ ವಿವಿಧ ಪೂಜೆ ಸಲ್ಲಿಸಿದರು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.
ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಎಲ್ಲೆಡೆ ವ್ಯಾಪಾರ ಅಧಿಕವಾಗಿತ್ತು. ಜಾತ್ರೆಯಲ್ಲಿ ಮಳಿಗೆಗಳು ಹಾಕಿದ್ದ ರಸ್ತೆಯಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ಸಾಗಿತ್ತು. ಮಕ್ಕಳ ಆಟಿಕೆ, ವೈವಿಧ್ಯಮಯ ಡ್ರೆಸ್, ಬಳೆ, ಅಲಂಕಾರಿಕಾ ವಸ್ತುಗಳ ಖರೀದಿಯಲ್ಲಿ ಜನರು ನಿರತರಾಗಿದ್ದರು.
ಜಾತ್ರೆ ಹಿನ್ನೆಲೆಯಲ್ಲಿ ಜಾತ್ರೆ ರಸ್ತೆ, ನಗರಸಭೆ ಸುತ್ತಮುತ್ತಲಿನ ಭಾಗ, ಕೋರ್ಟ್ ರಸ್ತೆ, ಅಮ್ಯೂಸ್‌ಮೆಂಟ್ ಪಾರ್ಕ್ ಭಾಗದಲ್ಲಿ ಸಾಕಷ್ಟು ಆಹಾರ ಮಳಿಗೆಗಳನ್ನು ಹಾಕಲಾಗಿದೆ. ಆಹಾರ ಪ್ರಿಯರು ತಮಗಿಷ್ಟದ ಸ್ಟಾಲ್‌ಗಳಲ್ಲಿ ಗೋಬಿ, ಮಸಾಲೆಪುರಿ, ಆಲೂ ಟ್ವಿಸ್ಟರ್, ಸ್ವೀಟ್ ಕಾರ್ನ್ ಸೇರಿಂದತೆ ವಿವಿಧ ಆಹಾರದ ರುಚಿ ಸವಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಅನ್ನದಾನಕ್ಕೆ ಕಾರ್ಮಿಕರ ದೇಣಿಗೆ : ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ದಿನ ನಿತ್ಯ ಅನ್ನದಾಸೋಹ ನಡೆಯುತ್ತಿದ್ದು, ದಾನಿಗಳ ಆರ್ಥಿಕ ಸಹಕಾರ ಹಾಗೂ ಜಾತ್ರಾ ಸಮಿತಿ ವತಿಯಿಂದ ಅನ್ನ ಸಂತರ್ಪಣೆ ಕಾರ್ಯ ನಡೆಯುತ್ತಿದೆ. ಭಾನುವಾರ ಕೂಡ ಸಾವಿರಾರು ಜನರು ದೇವರ ದರ್ಶನ ಪಡೆದರು. ವೀರಶೈವ ಕಲ್ಯಾಣ ಮಂದಿರದಲ್ಲಿ ಸಾವಿರಾರು ಜನರು ಪ್ರಸಾದ ಸೇವಿಸಿದರು. ಭಾನುವಾರದ ಅನ್ನ ದಾಸೋಹಕ್ಕೆ ಖಾಸಗಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ 1.5 ಲಕ್ಷ ರೂ.ಗೂ ಅಧಿಕ ದೇಣಿಗೆ ನೀಡಲಾಯಿತು. ಪ್ರಮುಖರಾದ ಆರ್.ಶ್ರೀನಿವಾಸ್, ರಾಬರ್ಟ್ ಗೂಮ್ಸ್, ರಾಜು ಎಸ್.ಎನ್. ನಗರ, ವಿ.ವೆಂಕಟೇಶ್, ಗಣೇಶ್.ಟಿ.ಎಂ., ಮುರುಗನ್ ಎಪಿಎಂ ಮತ್ತಿತರರು ದೇಣಿಗೆ ಸಹಕಾರ ನೀಡಿದ್ದಾರೆ.
ಸಾಂಸ್ಕೃತಿಕ ಸಂಭ್ರಮ: ಶ್ರೀ ಮಾರಿಕಾಂಬಾ ಜಾತ್ರೆ ಪ್ರಯುಕ್ತ ಫೆ. 8ರಿಂದಲೂ ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾತ್ರೆಯ ಸಾಂಸ್ಕೃತಿಕ ಸಮಿತಿಯು ನಾಡಿನ ಹೆಸರಾಂತ ಕಲಾವಿದರು ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ. ಸಾವಿರಾರು ಕಲಾಸಕ್ತರು ದಿನನಿತ್ಯ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ.
ನಾನು ಸಾಗರದಲ್ಲಿ ಜನಿಸಿದವನು, ದೇಶದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮ ನೀಡಿದರೂ ನನ್ನೂರಿನ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಕಾರ್ಯಕ್ರಮ ನೀಡುವುದು ಅತ್ಯಂತ ಹೆಮ್ಮೆಯ ಹಾಗೂ ಸಂತಸದ ಸಂಗತಿ. ಪ್ರಸಿದ್ಧ ವಾದ್ಯಗಾರರು ನನ್ನೊಂದಿಗೆ ಪ್ರದರ್ಶನ ನೀಡುತ್ತಿದ್ದಾರೆ. | ಶ್ರೀಧರ ಸಾಗರ, ಸ್ಯಾಕ್ಸೋಫೋನ್
ಸುಗಮ ಸಂಗೀತ, ಭಾವಸಂಗೀತ, ರಸಮಂಜರಿ, ಭರತನಾಟ್ಯ, ಸ್ಯಾಕ್ಸೋಫೋನ್ ವಾದನ, ಯೋಗ ಪ್ರದರ್ಶನ, ಡೊಳ್ಳು ಪ್ರದರ್ಶನ, ಮಲ್ಲಗಂಬ ಪ್ರದರ್ಶನ, ಸೀತಾರ್ ವಾದನ, ವಿವಿಧ ವಾದ್ಯಗಳ ಫ್ಯೂಸನ್ ಕಾರ್ಯಕ್ರಮ, ಕೋಲಾಟ, ನೃತ್ಯ ಕಾರ್ಯಕ್ರಮ ಹೀಗೆ ಹತ್ತು ಅನೇಕ ಕಾರ್ಯಕ್ರಮಗಳನ್ನು ಜಾತ್ರಾ ಸಮಿತಿ ಆಯೋಜಿಸಿದೆ.
ಸಾಗರದ ನಗರಸಭೆಯ ಆವರಣದಲ್ಲಿ ನಿರ್ಮಿಸಿರುವ ಮಾರಿಕಾಂಬಾ ಕಲಾವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಎಲ್ಲರ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಸಾಂಸ್ಕೃತಿಕ ಪ್ರದರ್ಶನಗಳು ಕಲಾವಿದರಿಂದ ಪ್ರದರ್ಶನ ಆಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಂಸ್ಕೃತಿಕ ಪ್ರದರ್ಶನ ನೇರವಾಗಿ ಪ್ರಸಾರಗೊಳ್ಳುತ್ತಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu