ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ

ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ

ಶಿವಮೊಗ್ಗ | 11 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರಾ ಪ್ರಯುಕ್ತ ಸಮಿತಿ ವತಿಯಿಂದ ಆಯೋಜಿಸಿರುವ ಹೊನಲು ಬೆಳಕಿನ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಮೂರು ದಿನಗಳ ಕಾಲ ಕುಸ್ತಿ ಪಂದ್ಯಾವಳಿ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕುಸ್ತಿ ಪಂದ್ಯಾವಳಿಯಲ್ಲಿ‌ ವಿವಿಧ ರಾಜ್ಯದ ಕುಸ್ತಿಪಟುಗಳು ಪಾಲ್ಗೊಳ್ಳಲಿದ್ದು, ನುರಿತ ತೀರ್ಪುಗಾರರ ನೇತೃತ್ವದಲ್ಲಿ ಘಟಾನುಘಟಿಗಳ ಕುಸ್ತಿ ಪಂದ್ಯಗಳು ನಡೆಯಲಿವೆ. ಮೊದಲ ದಿನವೇ ನೂರಾರು ಕುಸ್ತಿಪಟುಗಳು ಭಾಗವಹಿಸಿದ್ದರು.

ಫೆ. 10ರಿಂದ ಕುಸ್ತಿ ಪಂದ್ಯಾವಳಿ ಆರಂಭವಾಗಿದ್ದು, ಶನಿವಾರ ಹಾಗೂ ಭಾನುವಾರ ಸಹ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿರುವ ಕುಸ್ತಿಪಟುಗಳ ಪಂದ್ಯಗಳು ನಡೆಯಲಿವೆ. ಎರಡು ದಿನ ಮಧ್ಯಾಹ್ನ 3ರಿಂದ ರಾತ್ರಿ 9ರವರೆಗೂ ಕುಸ್ತಿ ಪಂದ್ಯಗಳು ನಡೆಯಲಿವೆ.

ಮಹಾರಾಷ್ಟ್ರದ ರಾಮ್, ಓಮಾಂಕ್ಷ್, ಹರ‍್ಯಾಣದ ಬಂಟಿ, ತೇಜು ಸೇರಿದಂತೆ ವಿವಿಧ ಕುಸ್ತಿಪಟುಗಳು ಆಗಮಿಸಿದ್ದರು. ಮೊದಲ ದಿನದಂದು ಶಿಕಾರಿಪುರದ ರಾಘು, ಚಂದ್ರು, ಮಧು ಭದ್ರಾವತಿ, ಶಿವಮೊಗ್ಗ ವಿನಯ ಭಗತ್, ಲಕ್ಷ್ಮಣ, ದಾವಣಗೆರೆ ರಾಕಿ ಸೇರಿ ವಿವಿಧ ಜಿಲ್ಲೆಗಳ ಕುಸ್ತಿಪಟುಗಳು ಭಾಗವಹಿಸಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿಜೇತರಿಗೆ ಬೆಳ್ಳಿ ಪದಕ, ಬೆಳ್ಳಿ ಬಳೆ, ಬೆಳ್ಳಿಯ ಗದೆ ಸೇರಿದಂತೆ ವಿಶೇಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತಿದೆ. ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಕುಸ್ತಿ ಸಂಚಾಲಕರಾಗಿ ಎಸ್.ಅಶೋಕ್, ಸಹಸಂಚಾಲಕರಾಗಿ ಎಂ.ಎಸ್.ಶಶಿಕಾಂತ್ ಮತ್ತು ಜಗನ್ನಾಥ್ ಜೇಡಿಕುಣಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕುಸ್ತಿ ಪಂದ್ಯಾವಳಿಗೆ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎನ್.ಗುರುಮೂರ್ತಿ ಚಾಲನೆ ನೀಡಿದರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಉಪಾಧ್ಯಕ್ಷ ಸುಂದರ್‌ಸಿಂಗ್, ಕುಸ್ತಿ ಸಂಚಾಲಕ ಎಸ್.ಅಶೋಕ್, ಸಹಸಂಚಾಲಕ ಎಂ.ಎಸ್.ಶಶಿಕಾಂತ್ ಮತ್ತು ಜಗನ್ನಾಥ್ ಜೇಡಿಕುಣಿ, ಸುದರ್ಶನ್ ಭಂಡಾರಿ, ದೇವೆಂದ್ರಪ್ಪ, ಅಶೋಕ್, ಸಿದ್ದಪ್ಪ, ತೀರ್ಪುಗಾರರು ಹಾಗೂ ಕುಸ್ತಿಪಟುಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!