ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ಸಂಪನ್ನ

ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ಸಂಪನ್ನ

ಶಿವಮೊಗ್ಗ | 17 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಶ್ರೀ ಮಾರಿಕಾಂಬ ದೇವಿಯನ್ನು ವೈಭವಯುತ ರಾಜಬೀದಿ ಉತ್ಸವದೊಂದಿಗೆ ವನಕ್ಕೆ ಬಿಡುವ ಕಾರ್ಯಕ್ರಮದ ಮೂಲಕ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯು ಸಂಪನ್ನಗೊಂಡಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಒಂಬತ್ತು ದಿನಗಳ ವಿಶೇಷ ಪೂಜಾ ವಿಧಿ ವಿಧಾನಗಳ ನಂತರ ಬುಧವಾರ ರಾತ್ರಿ ಶ್ರೀ ಮಾರಿಕಾಂಬಾ ಜಾತ್ರೆಯು ಮುಕ್ತಾಯಗೊಂಡಿದ್ದು, ಬುಧವಾರ ಮಧ್ಯರಾತ್ರಿ ನಂತರ ಶ್ರೀ ಮಾರಿಕಾಂಬಾ ದೇವಿಯ ಆಕರ್ಷಕ ಮೂರ್ತಿಯನ್ನು ಮೆರವಣಿಗೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವನಕ್ಕೆ ಬಿಡಲಾಯಿತು. ಮಾರಿಕಾಂಬೆಯನ್ನು ವನಕ್ಕೆ ಬಿಡುವ ರಾಜಬೀದಿ ಉತ್ಸವದಲ್ಲಿ ಡೊಳ್ಳು ತಂಡಗಳು, ವೇಷಭೂಷಣಗಳ ನೃತ್ಯ ಕಲಾವಿದರು, ವಿವಿಧ ವಾದ್ಯಗಳ ತಂಡದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಾವಿರಾರು ಜನರು ಮಧ್ಯರಾತ್ರಿ ಆರಂಭಗೊಂಡ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಮೂರು ವರ್ಷಗಳ ಹಿಂದಿನ ಶ್ರೀ ಮಾರಿಕಾಂಬಾ ಜಾತ್ರೆಯು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ ಜಾತ್ರೆ ಆಗಿತ್ತು. ಆದರೆ ಈ ವರ್ಷ ನಡೆದ ಜಾತ್ರೆಯು ಎಲ್ಲ ಜಾತ್ರೆಗಳನ್ನು ಮೀರಿಸಿತ್ತು. ಹತ್ತು ದಿನದ ಜಾತ್ರೆಯಲ್ಲಿ 15-18 ಲಕ್ಷಕ್ಕೂ ಅಧಿಕ ಜನರು ಶ್ರೀ ಮಾರಿಕಾಂಬಾ ಜಾತ್ರೆಗೆ ಸಾಗರಕ್ಕೆ ಆಗಮಿಸಿದ್ದರು ಎಂದು ಅಂದಾಜಿಸಲಾಗಿದೆ. ಎಲ್ಲ ವ್ಯವಸ್ಥೆಯು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ನಗರಸಭೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಾತ್ರಾ ಸಮಿತಿ, ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರದಿಂದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಸಾಗರದ ನಗರಸಭೆ ಆವರಣದಲ್ಲಿ ಮಾರಿಕಾಂಬಾ ಕಲಾವೇದಿಕೆಯಲ್ಲಿ ಸಾಂಸ್ಕೃತಿಕ ಸಂಭ್ರಮದ ಸಮಾರೋಪ ನಡೆಯಿತು. ಸಾಗರದ ರವಿವರ್ಮ ಆರ್ಟ್ಸ್ ಸಂಸ್ಥೆಯ ವಿದ್ಯಾರ್ಥಿಗಳು ಬಿಡಿಸಿದ ಚಿತ್ರಗಳು ಎಲ್ಲರ ಗಮನ ಸೆಳೆದವು. ಸಾಗರ ಜೇನುಗೂಡು ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ನಂತರ ಸುರೇಖಾ ಹೆಗ್ಡೆ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಮಾರೋಪ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ನಾ.ಡಿಸೋಜಾ, ಶಾಸಕ ಹರತಾಳು ಹಾಲಪ್ಪ, ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಖಜಾಂಚಿ ನಾಗೇಂದ್ರ ಕುಮುಟಾ, ಮಾಜಿ ಎಂಎಲ್‌ಸಿ ಫ್ರಫುಲ್ಲಾ ಮಧುಕರ್, ವಿ.ಟಿ.ಸ್ವಾಮಿ, ಉಪಾಧ್ಯಕ್ಷರು, ವಿವಿಧ ಸಮಿತಿಗಳ ಸಂಚಾಲಕರು, ಸಹ ಸಂಚಾಲಕರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!