ಕೆಳದಿ ಶಿವಪ್ಪನಾಯಕನ ಕುರಿತು ಶೀಘ್ರವೇ ಸಿನಿಮಾ ಮಾಡುವ ನಂಬಿಕೆಯಿದೆ
ಶಿವಮೊಗ್ಗ | 9 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಕೆಳದಿ ಶಿವಪ್ಪನಾಯಕನ ಕುರಿತು ನಾಲ್ಕು ವರ್ಷಗಳ ಅಧ್ಯಯನ ನಡೆಸಿ ಸಿನಿಮಾ ಮಾಡಲು ಸ್ಕ್ರಿಪ್ಟ್ ಸಿದ್ಧಪಡಿಸಿದ್ದೇನೆ ಎಂದು ರಂಗಕರ್ಮಿ, ನಟ ಟಿ.ಎಸ್.ನಾಗಾಭರಣ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸಾಗರದ ನಗರಸಭೆ ಆವರಣದ ಮಾರಿಕಾಂಬ ಕಲಾವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಕೆಳದಿ ಶಿವಪ್ಪನಾಯಕನ ಕುರಿತ ಸಿನಿಮಾ ಮಾಡುತ್ತೇನೆ ಎಂಬ ನಂಬಿಕೆಯಿದೆ. ಕೆಳದಿ ಚೆನ್ನಮ್ಮನ 25 ವರ್ಷಗಳ ಆಡಳಿತ ಇಂದಿಗೂ ಸ್ಫೂರ್ತಿದಾಯಕ ಎಂದು ತಿಳಿಸಿದರು.
ಭಾರತೀಯ ಪರಂಪರೆಯು ವಿಶ್ವದ ಶ್ರೇಷ್ಠ ಪರಂಪರೆಯಾಗಿದ್ದು, ಪ್ರಸ್ತುತ ದಿನಗಳಲ್ಲಿ ಭಾರತೀಯ ಶ್ರೇಷ್ಠ ಪರಂಪರೆಯನ್ನು ವಿಶ್ವವೇ ಒಪ್ಪಿಕೊಳ್ಳುತ್ತಿದೆ. ಭಾರತೀಯ ಪರಂಪರೆಯನ್ನು ಕೀಳಾಗಿ ಕಾಣುವ ಮನೋಭಾವವನ್ನು ಮೆಕಾಲೆ ಶಿಕ್ಷಣ ಪದ್ಧತಿ ಎಲ್ಲರಲ್ಲಿಯೂ ಮೂಡಿಸುತ್ತಿತ್ತು. ಭಾರತೀಯ ವಿಷಯ ಹಾಗೂ ವಿಚಾರಧಾರೆ ಎಂದರೆ ಅದೂ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಚಿಂತನೆ ಬೆಳೆದುಬಿಟ್ಟಿತ್ತು. ಪ್ರಸ್ತುತ ಭಾರತೀಯ ಶ್ರೇಷ್ಠ ಪರಂಪರೆಯನ್ನು ವಿಶ್ವಾದ್ಯಂತ ಒಪ್ಪಿಕೊಳ್ಳಲಾಗುತ್ತದೆ ಎಂದರು.
ಇಡೀ ಜಗತ್ತಿಗೆ ವಿಶ್ವಮಾನವ ತತ್ವವನ್ನು ಸಾರಿದ್ದು ಕನ್ನಡಿಗರು. ಆದಿಕವಿ ಪಂಪನಿಂದ ಇವತ್ತಿನವರೆಗೂ ಎಲ್ಲರೂ ವಿಶ್ವಮಾನವ ಸಂದೇಶಗಳನ್ನು ಸಾರಿದರು. ಭಾರತ ದೇಶ ವಿಶ್ವಗುರು ಆಗುವ ದಿಸೆಯಲ್ಲಿ ಭಾರತೀಯ ಪರಂಪರೆ ಹಾಗೂ ಶ್ರದ್ಧೆಯ ಕೇಂದ್ರಗಳಲ್ಲಿನ ಆಚರಣೆಯು ಬಹುಮುಖ್ಯ ಕಾರಣ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಸಂಸ್ಕೃತಿಯ ಅನ್ವರ್ಥ ನಾಮ ಸಾಗರ. ಸಂಸ್ಕೃತಿ, ಸಾಹಿತ್ಯ, ಧಾರ್ಮಿಕ, ಪ್ರಾಕೃತಿಕವಾಗಿಯೂ ಸಾಗರ ಅತ್ಯಂತ ಶ್ರೀಮಂತಿಕೆಯಿಂದ ಕೂಡಿದೆ. ಸಾಂಸ್ಕೃತಿಕ ವೇದಿಕೆಗಳ ಮುಖಾಂತರ ಸ್ಥಳೀಯ ಯುವ ಪ್ರತಿಭಾವಂತ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ಅತ್ಯದ್ಭುತ ವೇದಿಕೆಯಾಗಿ ಮಾರ್ಪಾಡಲಿದೆ ಎಂದು ತಿಳಿಸಿದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಶಾಸಕಿ ಭಾರತಿ ಶೆಟ್ಟಿ, ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಖಜಾಂಚಿ ನಾಗೇಂದ್ರ ಕುಮಟಾ, ಸಾಂಸ್ಕೃತಿಕ ಸಮಿತಿ ಸಂಚಾಲಕ ಲೋಕೇಶ್ ಕುಮಾರ್ ಗುಡಿಗಾರ್, ಉಪಾಧ್ಯಕ್ಷ ವಿ.ಶಂಕರ್, ಸಹ ಕಾರ್ಯದರ್ಶಿ ಆನಂದ್, ವಸ್ತು ಪ್ರದರ್ಶನ ಸಮಿತಿ ಸಂಚಾಲಕ ತಾರಾಮೂರ್ತಿ, ಪ್ರಮುಖರಾದ ಲಲಿತಮ್ಮ, ಭಾವನಾ ಸಂತೋಷ್, ವಿ.ಮಹೇಶ್, ತುಕಾರಾಂ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu