ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ

ಶಿವಮೊಗ್ಗ | 9 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಫೆಬ್ರವರಿ 27ರಂದು ಪ್ರಧಾನಿ ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನ, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಇಂಟರ್‌ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸ್ಥಳೀಯವಾಗಿ ಅಂಬ್ಯುಲೆನ್ಸ್, ಅಗ್ನಿಶಾಮಕ ದಳದ ವಾಹನ ವ್ಯವಸ್ಥೆಯನ್ನು ಮಾಡಬೇಕು. ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟ್ರ ಗೀತೆ ನುಡಿಸಲಾಗುವುದು. ಆಹಾರದ ಸುರಕ್ಷತೆ, ಬೆಂಕಿ ಸುರಕ್ಷತೆ ಮತ್ತು ವಿದ್ಯುತ್ ಸುರಕ್ಷತೆಯನ್ನು ಇಲಾಖಾಧಿಕಾರಿಗಳು ಪ್ರಮಾಣೀಕರಿಸಬೇಕು ಎಂದರು.

ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಪಂ ಸಿಇಒ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ವಿಶೇಷಾಧಿಕಾರಿ ರಾಜಪ್ಪ, ಎಎಸ್‌ಪಿ ಅನಿಲ್ ಕುಮಾರ್ ಭೂಮರಡ್ಡಿ, ಪಿಡಬ್ಲುಡಿ ಚೀಫ್ ಇಂಜಿನಿಯರ್ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!