ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ ಕಾರ್ಯಕ್ರಮ ಫೆಬ್ರವರಿ 19ಕ್ಕೆ, ನಟಿ ಪ್ರೇಮಾಗೆ ಬೆಳ್ಳಿಹಬ್ಬದ ಸಂಭ್ರಮ

ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ ಕಾರ್ಯಕ್ರಮ ಫೆಬ್ರವರಿ 19ಕ್ಕೆ, ನಟಿ ಪ್ರೇಮಾಗೆ ಬೆಳ್ಳಿಹಬ್ಬದ ಸಂಭ್ರಮ

ಶಿವಮೊಗ್ಗ | 18 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ನಟಿ ಪ್ರೇಮಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಪ್ರಯುಕ್ತ ಸಮನ್ವಯ ಟ್ರಸ್ಟ್ ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19ರ ಸಂಜೆ 6ಕ್ಕೆ “ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಕಾರ್ಯಕ್ರಮ ಉದ್ಘಾಟಿಸುವರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪ್ರಶಸ್ತಿ ಪ್ರದಾನ ಮಾಡುವರು. ಸಮನ್ವಯ ಟ್ರಸ್ಟ್ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಅಧ್ಯಕ್ಷತೆ ವಹಿಸುವರು.

ಹಾರ್ಟ್ ಫುಲ್‌ನೆಸ್ ರಾಜ್ಯ ಸಂಚಾಲಕ ಕೆ.ಮಧುಸೂದನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಕಾರ್ಯನಿರ್ವಾಹಕ ನಿರ್ದೇಶಕ ಅರವಿಂದ್ ಶಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

“ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಕಾರ್ಯಕ್ರಮದ ಜತೆಯಲ್ಲಿ ನೃತ್ಯ ಹಾಗೂ ಗಾಯನ ಕಾರ್ಯಕ್ರಮ ಇರಲಿದೆ. ಪಾಸ್ ಕಡ್ಡಾಯವಾಗಿದ್ದು, ಉಚಿತ ಪಾಸ್‌ಗಳನ್ನು ಪಡೆಯಲು ಇಚ್ಚಿಸುವ ಆಸಕ್ತರು ಮೊಬೈಲ್ ಸಂಖ್ಯೆ 9380233123 ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!