ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆಯಿಂದ ಅಗತ್ಯ ಕ್ರಮ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆಯಿಂದ ಅಗತ್ಯ ಕ್ರಮ

ಶಿವಮೊಗ್ಗ | 24 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಜಿಲ್ಲಾಡಳಿತದಿಂದ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಎರಡು  ಕಡೆ ಊಟದ ವ್ಯವಸ್ಥೆ ಮಾಡಲಾಗಿದೆ. ನೂರು ಕೌಂಟರ್‌ಗಳನ್ನು ತೆರೆಯಲಾಗುವುದು. ಕಾರ್ಯಕ್ರಮ ವೀಕ್ಷಣೆಗೆ ನಾಲ್ಕು ಕಡೆ ವಿಶಾಲ ಪ್ರಾಜೆಕ್ಟರ್‍ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಸಿದ್ದತೆಗಳೊಂದಿಗೆ ಸೂಕ್ತ ಪೊಲೀಸ್ ಬಂಧೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.

ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ವಿವರ: 775 ಎಕರೆ ವಿಸ್ತೀರ್ಣದಲ್ಲಿ 449.22 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಎಲ್ಲ ರೀತಿಯ ವಿಮಾನಗಳು ಹಗಲು ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ  3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಸೌಲಭ್ಯಗಳೊಂದಿಗೆ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರು ಬೆಳಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು. ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇದೆ ಎಂದರು.

ಕಾರ್ಯಕ್ರಮಕ್ಕೆ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‍ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‌ ತರಲು ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!