ಗಾಳಿಪಟ ಹಾರಾಟ, ನೃತ್ಯ ಸಂಗೀತ, ಶಿವಮೊಗ್ಗ ಜನತೆಯ ಮುಗಿಲೆತ್ತರದ ಮಲೆನಾಡು ಸಂಭ್ರಮ, ನಟಿ ಆಶಾ ಭಟ್ ಭಾಗಿ
ಶಿವಮೊಗ್ಗ | 26 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ವಿಮಾನ ನಿಲ್ದಾಣ ಉದ್ಘಾಟನೆ ಆಗುತ್ತಿರುವ ಸಂಭ್ರಮದಲ್ಲಿರುವ ಶಿವಮೊಗ್ಗ ಜನತೆ ಶನಿವಾರ ಆಯೋಜಿಸಿದ್ದ ಮುಗಿಲೆತ್ತರಕ್ಕೆ ಮಲೆನಾಡು ಕಾರ್ಯಕಮದಲ್ಲಿ ಭಾಗಿಯಾಗಿ ಸಂಭ್ರಮ ಆಚರಿಸಿದರು. ಶಿವಮೊಗ್ಗ ಜನರು, ಮಹಿಳೆಯರು, ಮಕ್ಕಳು ಗಾಳಿಪಟವನ್ನು ಮುಗಿಲೆತ್ತರಕ್ಕೆ ಹಾರಿಸಿ ಸಂತಸಪಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದು, ಶಿವಮೊಗ್ಗ ಜನತೆ ಸಂಭ್ರಮದ ಕ್ಷಣಕ್ಕೆ ಸಾಕ್ಷಿ ಆಗಲಿರುವ ಹಿನ್ನೆಲೆಯಲ್ಲಿ ಫ್ಲೈ ಶಿವಮೊಗ್ಗ ತಂಡದಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮುಗಿಲೆತ್ತರಕ್ಕೆ ಮಲೆನಾಡು ಸಂಭ್ರಮ ಆಚರಣೆ ಆಯೋಜಿಸಲಾಗಿತ್ತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವವರ ಭಾವಚಿತ್ರ ಒಳಗೊಂಡ ಗಾಳಿಪಟಗಳು, ಬಗೆಬಗೆಯ ವಿನ್ಯಾಸದ ಆಕರ್ಷಕ ಗಾಳಿಪಟ, ಪಕ್ಷಿಗಳ ಆಕಾರ ಹೋಲುವ ಗಾಳಿಪಟ ಸೇರಿದಂತೆ ಅತ್ಯಾಕರ್ಷಕ ಗಾಳಿಪಟಗಳು ಆಕಾಶದಲ್ಲಿ ಹಾರಿದವು.
ಗಾಳಿಪಟ ಉತ್ಸವ ನಂತರ ಸಂಗೀತ, ನೃತ್ಯ ಗಾಯನ ಕಾರ್ಯಕ್ರಮ ನಡೆಯಿತು. ನಟಿ ಆಶಾ ಭಟ್ ಭಾಗವಹಿಸಿ ಸಂತಸ ಹಂಚಿಕೊಂಡರು. ಶಿವಮೊಗ್ಗ ನಗರದ ವಿವಿಧ ಡ್ಯಾನ್ಸ್ ಶಾಲೆಯ ಮಕ್ಕಳು ನೃತ್ಯ ಮಾಡಿ ಎಲ್ಲರನ್ನು ರಂಜಿಸಿದರು. ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ ಸಿನಿಮಾಗಳ ಹಾಡಿಗೆ ನೃತ್ಯ ಮಾಡಿದರು. ಗಾಯಕರು ಹೊಸ ಚಲನಚಿತ್ರಗಳ ಗೀತೆಗಳನ್ನು ಹಾಡಿದರು. ನಂತರ ಸಿಡಿಮದ್ದುಗಳ ಪ್ರದರ್ಶನ ನಡೆಯಿತು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಫ್ಲೈ ಶಿವಮೊಗ್ಗ ತಂಡದಿಂದ ಸನ್ಮಾನಿಸಲಾಯಿತು. ಬಿಎಸ್‌ವೈ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಲ್‌ಸಿ ಡಿ.ಎಸ್.ಅರುಣ್, ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಎಂ.ಬಿ.ಹರಿಕೃಷ್ಣ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಎಸ್.ಎಸ್.ಜ್ಯೋತಿಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu