ಧೀಮಂತ ನಾಯಕರ ಆದರ್ಶ ಪ್ರೇರಣೀಯ

ಧೀಮಂತ ನಾಯಕರ ಆದರ್ಶ ಪ್ರೇರಣೀಯ

ಶಿವಮೊಗ್ಗ | 19 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ನಮ್ಮ ದೇಶದ ಧೀಮಂತ ನಾಯಕರ ಆದರ್ಶ ಯುವ ಸಮೂಹಕ್ಕೆ ಪ್ರೇರಣೀಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನಗರದ ಜಯಪ್ರಕಾಶ್ ನಾರಾಯಣ್ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಯಪ್ರಕಾಶ್ ನಾರಾಯಣ್ ದೇಶ ಕಂಡ ಅದ್ಭುತ ಧೀಮಂತ ನಾಯಕ. ಯುವ ಸಮೂಹ ಅಂತಹ ನಾಯಕರ ಆದರ್ಶಗಳನ್ನು ಅರಿತು ದೇಶದ ಸುಭದ್ರತೆಯತ್ತ ಚಿಂತನೆ ನಡೆಸಬೇಕಿದೆ. ಶಿಕ್ಷಣವೆಂಬುದು ನಮ್ಮ ಬದುಕಿನ ಬುನಾದಿ, ಅಂತಹ ಶಿಕ್ಷಣದ ಜೊತೆಗೆ ನಮ್ಮಲ್ಲಿನ ಪ್ರತಿಭೆಗಳಿಗೆ ಪ್ರೇರಣೆ ನೀಡುವುದು ಶಾಲೆ ಕಾಲೇಜುಗಳ ವಿದ್ಯಾರ್ಥಿ ಸಂಘಗಳು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯ ಶಂಕರ್ ಗನ್ನಿ ಮಾತನಾಡಿ, ಮಹಾನಗರ ಪಾಲಿಕೆ ವತಿಯಿಂದ ಹತ್ತು ಲಕ್ಷ ರೂಪಾಯಿ ಅನುದಾನದಲ್ಲಿ ಕಾಲೇಜಿನ ಅಭಿವೃದ್ಧಿಗೆ ಅವಶ್ಯಕ ವಿವಿಧ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ನಿವೃತ್ತ ಉಪನ್ಯಾಸಕ ಬಿ.ಕೆ.ವೆಂಕಟೇಶಮೂರ್ತಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಕೆ.ಕೆಂಚಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ದಯಾನಂದ ನಾಯ್ಕ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೌಂದರ್ಯ ಉಪಸ್ಥಿತರಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ವಿದ್ಯಾರ್ಥಿ ವೇತನ ಚೆಕ್ ವಿತರಿಸಲಾಯಿತು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!