ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಹೊಲಿಗೆ ಯಂತ್ರ ವಿತರಣೆ

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಹೊಲಿಗೆ ಯಂತ್ರ ವಿತರಣೆ

ಶಿವಮೊಗ್ಗ | 6 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಕುಟುಂಬದ ಆರ್ಥಿಕ ವ್ಯವಸ್ಥೆಯ ಸದೃಢ ಸಾಧ್ಯವಾಗಲಿದೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ರೋಟರಿ ಜಿಲ್ಲಾ ಗವರ್ನರ್ ಡಾ. ಜಯಗೌರಿ ಹಾದಿಗಲ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರಾಜೇಂದ್ರ ನಗರದ ರೋಟರಿ ಶಾಲೆ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಲ್ಕು ಜಿಲ್ಲೆಯಿಂದ ಆರ್ಥಿಕವಾಗಿ ಹಿಂದುಳಿದ ಬಡಮಹಿಳೆಯರಿಗೆ 500 ಕ್ಕೂ ಹೆಚ್ಚು ಹೊಲಿಗೆ ಯಂತ್ರ ವಿತರಿಸುವ ಕಾರ್ಯ ನಡೆಸುತ್ತಿದೆ. ಸಾರ್ವಜನಿಕರಿಗೆ ಅನುಕೂಲ ಒದಗಿಸುವ ಸಮಾಜಮುಖಿ ಚಟುವಟಿಕೆಗಳನ್ನು ರೋಟರಿ ಸಂಸ್ಥೆ ನಿರಂತರವಾಗಿ ಮುನ್ನಡೆಸುತ್ತಿದೆ ಎಂದು ತಿಳಿಸಿದರು.

ರೊಟರಿ ವಲಯ ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ ಮಾತನಾಡಿ, ರೋಟರಿ ಸಂಸ್ಥೆಯು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸುತ್ತಿದ್ದು, ವಿಶ್ವಾದ್ಯಂತ ಸದಸ್ಯರನ್ನು ಹೊಂದಿರುವ ಸೇವಾ ಸಂಸ್ಥೆಯಾಗಿದೆ. ಹೆಚ್ಚು ಹೆಚ್ಚು ಸದಸ್ಯರನ್ನು ಸೇರಿಸಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಬಡಮಹಿಳೆಯರಿಗೆ ಈ ವರ್ಷ 15ಕ್ಕೂ ಹೆಚ್ಚು ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ವಲಯ ಸೇನಾನಿ ರವಿ ಕೋಟೋಜಿ, ನಾಗವೇಣಿ, ಬಿಂದು ವಿಜಯ್‌ಕುಮಾರ್, ವಿಜಯ ರಾಯ್ಕರ್, ಮಧುರಾ ಮಹೇಶ್, ರೋಟರಿ ಸದಸ್ಯರು, ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!