ಸಾಗರದ ಶ್ರೀ ಮಾರಿಕಾಂಬ ಜಾತ್ರೆಗೆ ಆರಂಭಕ್ಕೆ ಸಕಲ ಸಿದ್ಧತೆ, ಮಂಗಳವಾರ ಶ್ರೀ ಮಾರಿಕಾಂಬ ದೇವಿಯ ಪ್ರತಿಷ್ಠಾಪನೆ

ಸಾಗರದ ಶ್ರೀ ಮಾರಿಕಾಂಬ ಜಾತ್ರೆಗೆ ಆರಂಭಕ್ಕೆ ಸಕಲ ಸಿದ್ಧತೆ, ಮಂಗಳವಾರ ಶ್ರೀ ಮಾರಿಕಾಂಬ ದೇವಿಯ ಪ್ರತಿಷ್ಠಾಪನೆ

ಶಿವಮೊಗ್ಗ | 6 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರೆ ಮಂಗಳವಾರ ಆರಂಭಗೊಳ್ಳಲಿದ್ದು, ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಲಕ್ಷಾಂತರ ಜನರು ದೇವಿಯ ದರ್ಶನ ಪಡೆಯಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಶ್ರೀ ಮಾರಿಕಾಂಬ ಜಾತ್ರೆಗೆ ಎರಡು ಮೂರು ತಿಂಗಳಿನಿಂದಲೇ ಸಿದ್ಧತೆ ನಡೆಸಲಾಗುತ್ತದೆ. ಜನವರಿ 31ರ ರಾತ್ರಿ ಅಂಕೆ ಹಾಕುವ ಮುಖಾಂತರ ಜಾತ್ರೆಯ ಆಚರಣೆಗೆ ಚಾಲನೆ ನೀಡಲಾಯಿತು. ಫೆ. 5 ರಿಂದ ದಿಂದ ಪೂಜಾ ಕಾರ್ಯಗಳು ಚಾಲನೆಗೊಂಡಿವೆ.

ದೇವಿಯ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ:  ಫೆ. 7ರ ಮಂಗಳವಾರ ಬೆಳಗ್ಗೆ 2ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ದೇವಿಯ ಮಾಂಗಲ್ಯ ಪೂಜೆ ನಡೆಯುತ್ತದೆ. ಪುರೋಹಿತರ ಮನೆಯಲ್ಲಿ ಪೂಜೆ ಸಲ್ಲಿಸಿ ಮಂಗಳವಾದ್ಯದೊಂದಿಗೆ ತಾಯಿಯ ಮನೆ ದೇವಸ್ಥಾನದ ಆವರಣಕ್ಕೆ ಮೆರವಣಿಗೆ ಆಗಮಿಸಲಿದೆ. ಫೆ. 7ರ ಮಂಗಳವಾರ ಬೆಳಗ್ಗೆ 5ಕ್ಕೆ ಬ್ರಾಹ್ಮೀ ಮಹೂರ್ತದಲ್ಲಿ ಶ್ರೀದೇವಿಗೆ ದೃಷ್ಠಿ ಇಡುವುದು, ಮಾಂಗಲ್ಯ ಧಾರಣೆ ಹಾಗೂ ಶ್ರೀ ಮಾರಿಕಾಂಬ ದೇವಿಯ ಪ್ರತಿಷ್ಠಾಪನೆ ಜರುಗಲಿದೆ.

ಫೆಬ್ರವರಿ 7ರ ರಾತ್ರಿ 10ಕ್ಕೆ ಶ್ರೀ ಪೋತರಾಜನಿಂದ ಚಾಟಿ ಸೇವೆ ನಂತರ ಹೆಣ್ಣು ಒಪ್ಪಿಸುವ ಕಾರ್ಯಕ್ರಮ ನಡೆಯಲಿದ್ದು, ಮಂಗಳವಾರ ರಾತ್ರಿ ಶ್ರೀದೇವಿಯ ದಂಡಿನ ಮೆರವಣಿಗೆಯು ಪ್ರಸಿದ್ಧ ಜಾನಪದ ಕಲಾ ತಂಡಗಳೊಂದಿಗೆ ರಾಜಬೀದಿ ಉತ್ಸವ ನಡೆಯಲಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಾಗರದ ಪ್ರಮುಖ ರಸ್ತೆಗಳಲ್ಲಿ ಉತ್ಸವ ಸಾಗಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರು ಹಾಗೂ ಕಲಾತಂಡಗಳು ಆಗಮಿಸಿ ಪಾಲ್ಗೊಳ್ಳಲಿವೆ. ಫೆ. 8ರ ಬೆಳಗ್ಗೆ ಶ್ರೀ ಮಾರಿಕಾಂಬ ದೇವಿಯ ಗಂಡನ ಮನೆ ದೇವಸ್ಥಾನದಲ್ಲಿ ಶ್ರೀ ದೇವಿಯ ಮೂರ್ತಿ ಕೂರಿಸಲಾಗುತ್ತದೆ. ಎಂಟು ದಿನಗಳ ಕಾಲ ಫೆಬ್ರವರಿ 15ರವರೆಗೂ ದೇವಿಯ ದರ್ಶನ ಮಾಡಲು ಸಾರ್ವಜನಿಕರಿಗೆ ಸಕಲ ರೀತಿಯಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.

ಶ್ರೀ ದೇವಿಯ ಹರಕೆ ಸಲ್ಲಿಸಲು ವಿಶೇಷ ಸೇವೆ, ಉಡಿ ಸೇವೆ, ಪಂಚಕಜ್ಜಾಯ ಪ್ರಸಾದ, ದೇವಿಗೆ ಹೂವಿನ ಅಲಂಕಾರ ಸೇವೆ, ತುಲಾಭಾರ ಸೇರಿದಂತೆ ವಿವಿಧ ಸೇವೆ ಸಲ್ಲಿಸಲು ಅವಕಾಶವಿದೆ. ಫೆಬ್ರವರಿ 7ರಿಂದ 15ರ ವರೆಗೂ ಪ್ರತಿ ದಿನ ಬೆಳಗ್ಗೆ 8 ಗಂಟೆಯಿಂದ ಮಹಾಮಂಗಳಾರತಿ, ರಾತ್ರಿ 9.30ರವರೆಗೆ ಶ್ರೀ ದೇವಿಗೆ ಪೂಜಾ ಕಾರ್ಯಕ್ರಮ, ಪ್ರಸಾದ ವಿನಿಯೋಗ ಇರುತ್ತದೆ.

ಶ್ರೀ ಮಾರಿಕಾಂಬ ಕಲಾ ವೇದಿಕೆ (ಗಂಡನ ಮನೆ)ಯಲ್ಲಿ ದಿನ ಸಂಜೆ 5.30ರಿಂದ ವಿವಿಧ ಸಂಘಟನೆಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ವಿವಿಧ ಭಜನಾ ತಂಡಗಳು ಪಾಲ್ಗೊಳ್ಳಲಿವೆ. ಒಂಬತ್ತು ದಿನಗಳ ವೈವಿಧ್ಯಮಯ ಪೂಜಾ ವಿಧಾನಗಳ ನಂತರ ಫೆಬ್ರವರಿ 15ರ ರಾತ್ರಿ 10.30ಕ್ಕೆ ಅಮ್ಮನವರಿಗೆ ಚಾಟಿಸೇವೆ, ಅಮ್ಮನವರಿಗೆ ನೈವೇದ್ಯ ಮಹಾಪ್ರಸಾದ ವಿನಿಯೋಗ, ನಂತರ ರಾತ್ರಿ 12ರಿಂದ ಬೆಳಗ್ಗೆ 5ರವರೆಗೂ ಪ್ರಸಿದ್ಧ ಜಾನಪದ ಕಲಾತಂಡಗಳೊಂದಿಗೆ ರಾಜಬೀದಿ ಉತ್ಸವ ನಡೆಯಲಿದೆ. ಶ್ರೀ ಮಾರಿಕಾಂಬ ದೇವಿಯನ್ನು ವನಕ್ಕೆ ಬಿಟ್ಟುಬರುವ ಮೂಲಕ ಜಾತ್ರೆಯು ಸಂಪನ್ನಗೊಳ್ಳಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!