ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ, ಶಿವಮೊಗ್ಗ ವಿದ್ಯಾರ್ಥಿನಿಯ ಉತ್ತಮ ಸಾಧನೆ
ಶಿವಮೊಗ್ಗ | 23 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಗೌತಮಿಗೌಡ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಫೆಬ್ರವರಿ 19 ರಿಂದ 22 ರ ವರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ವತಿಯಿಂದ ಆಯೋಜಿಸಿದ್ದ 2022 – 23 ನೇ ಸಾಲಿನ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಆಟದ ಪ್ರದರ್ಶನ ನೀಡಿದ್ದಾರೆ.
17 ವರ್ಷ ವಯೋಮಿತಿ ಒಳಗಿನ ವಿಭಾಗದ ಎತ್ತರ ಜಿಗಿತದಲ್ಲಿ 1.58 ಮೀ ದಾಖಲೆ ಎತ್ತರ ಜಿಗಿದು ಇತಿಹಾಸ ನಿರ್ಮಿಸಿ ಬಂಗಾರದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ ಶಿವಮೊಗ್ಗದ ಹೆಮ್ಮೆಯ ಪ್ರತಿಭಾನ್ವಿತ ಕ್ರೀಡಾಪಟು ಗೌತಮಿ ಗೌಡ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಗೌತಮಿಗೌಡ ಅವರು ಶಿವಮೊಗ್ಗ ನಗರದ ಕೆ.ಯು. ವಿಷ್ಣುವರ್ಧನ ಮತ್ತು ಸುಷ್ಮಾ ದಂಪತಿ ಪುತ್ರಿಯಾಗಿರುತ್ತಾರೆ.
ರಾಷ್ಟ್ರ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಾಚಾರ್ಯರು ಶುಭಕೋರಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu