ಗುರುಶಿಷ್ಯ ಪರಂಪರೆ ತರಬೇತಿಗೆ ಅರ್ಜಿ ಆಹ್ವಾನ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ

ಗುರುಶಿಷ್ಯ ಪರಂಪರೆ ತರಬೇತಿಗೆ ಅರ್ಜಿ ಆಹ್ವಾನ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ

ಶಿವಮೊಗ್ಗ | 17 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2022-23 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಗುರುಶಿಷ್ಯ ಪರಂಪರೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಗುರುಶಿಷ್ಯ ಪರಂಪರೆ ಅಕಾಡೆಮಿ ವ್ಯಾಪ್ತಿಯೊಳಗೆ ಬರುವ ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನೃತ್ಯ (ಭರತನಾಟ್ಯ, ಕಥಕ್, ಕೂಚಿಪುಡಿ), ಕಥಾಕೀರ್ತನ ಮತ್ತು ಗಮಕ ಕ್ಷೇತ್ರಗಳಲ್ಲಿ ಪ್ರತಿಷ್ಠಿತ ಸಂಸ್ಥೆಯ ಗುರುಗಳ ಮೂಲಕ 5 ತಿಂಗಳ ಸಂಗೀತ ನೃತ್ಯ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳು 16 ರಿಂದ 30 ವರ್ಷದ ಒಳಗಿರಬೇಕು. ಗುರುಗಳ ಬಳಿ ಕನಿಷ್ಠ 2 ವರ್ಷ ಅಭ್ಯಾಸ ಮಾಡಿರಬೇಕು. ಗುರುಗಳ ಪ್ರಮಾಣ ಪತ್ರ ಲಗತ್ತಿಸಬೇಕು. ಓದು ಬರಹ ಬಲ್ಲವರಾಗಿರಬೇಕು. ಪ್ರತಿಷ್ಠಿತ ಸಂಸ್ಥೆಗಳು ಅರ್ಜಿ ಸಲ್ಲಿಸಲು ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿರಬೇಕು. ಸಂಸ್ಥೆ ನೊಂದಣಿ ಹಾಗೂ ನವೀಕರಣ ಪತ್ರ ಲಗತ್ತಿಸಬೇಕು.

ಶಿಬಿರಾರ್ಥಿಗಳು ಹಾಗೂ ಪ್ರತಿಷ್ಠಿತ ಸಂಸ್ಥೆಗಳ ಗುರುಗಳು ನಿಗದಿತ ಅರ್ಜಿಯನ್ನು ಅಕಾಡೆಮಿ ಹಾಗೂ  ಬೇರೆಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಭರ್ತಿ ಮಾಡಿದ ಅರ್ಜಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಬೆಂಗಳೂರು-2 ಇಲ್ಲಿಗೆ ಫೆ.28 ರೊಳಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ ಅಕಾಡೆಮಿ ಅಂತರ್ಜಾಲ ತಾಣ https://sangeetanrityaacademy.karnataka.gov.in   ಸಂಪರ್ಕಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್ ಬಿ.ನೀಲಮ್ಮ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!