ಶಿವಮೊಗ್ಗದ ಕೃಷಿ ಮಹಾವಿದ್ಯಾಲಯದಲ್ಲಿ ಮಾರ್ಚ್ 17ರಿಂದ 20ರವರೆಗೆ “ಕೃಷಿ ಮತ್ತು ತೋಟಗಾರಿಕಾ ಮೇಳ 2023”

ಶಿವಮೊಗ್ಗದ ಕೃಷಿ ಮಹಾವಿದ್ಯಾಲಯದಲ್ಲಿ ಮಾರ್ಚ್ 17ರಿಂದ 20ರವರೆಗೆ “ಕೃಷಿ ಮತ್ತು ತೋಟಗಾರಿಕಾ ಮೇಳ 2023”

ಶಿವಮೊಗ್ಗ | 15 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಸುಸ್ಥಿರ ಆದಾಯಕ್ಕಾಗಿ, ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ ಘೋಷವಾಕ್ಯದೊಂದಿಗೆ ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದಲ್ಲಿ ಮಾರ್ಚ್‌ 17ರಿಂದ 20ರವರೆಗೆ “ಕೃಷಿ ಮತ್ತು ತೋಟಗಾರಿಕೆ ಮೇಳ 2023” ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್‌.ಸಿ.ಜಗದೀಶ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಾರ್ಚ್‌ 17ರ ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷಿ ಮೇಳವನ್ನು ಉದ್ಘಾಟಿಸುವರು. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೃಷಿ ಸಚಿವ ಬಿ.ಸಿ.ಪಾಟೀಲ್‌, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ ಸೇರಿದಂತೆ ಏಳು ಜಿಲ್ಲೆಗಳ ವ್ಯಾಪ್ತಿಯ ಎಲ್ಲ ಜನಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಶ್ವವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಾಧನೆ ಮಾಡಿರುವ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು. ವಿವಿಧ ನವೀನ ತಾಂತ್ರಿಕತೆಗಳು ಮತ್ತು ವಿವಿಧ ಬೆಳೆಗಳ ಹೊಸ ತಳಿಗಳನ್ನು ಮತ್ತು ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಹಾಗೂ ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಕ ಕೈಪಿಡಿ ಬಿಡುಗಡೆಗೊಳಿಸಲಾಗುವುದು ಎಂದರು.

ಕೃಷಿ ಮತ್ತು ತೋಟಗಾರಿಕಾ ಮೇಳ ಅನೇಕ ವಿಶೇಷತೆಗಳಿಂದ ಕೂಡಿರಲಿದ್ದು, ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಹೈ-ಟೆಕ್ ತೋಟಗಾರಿಕೆ, ಪುಷ್ಪ ಕೃಷಿ, ಜೇನು ಸಾಕಾಣಿಕೆ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಕೃಷಿ-ತೋಟಗಾರಿಕೆ-ಅರಣ್ಯ ಸಮಗ್ರ ಪದ್ಧತಿಗಳು ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಾವಯವ ಕೃಷಿ, ಅಣಬೆ ಬೇಸಾಯ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಹವಾಮಾನ ಆಧಾರಿತ ಕೃಷಿ, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ ಮಾಹಿತಿ ನೀಡಲಾಗುತ್ತದೆ ಎಂದರು.

ಶ್ರೇಷ್ಠ ಕೃಷಿಕರು ಮತ್ತು ಕೃಷಿ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ, ರೈತರ ಯಶೋಗಾಥೆ ಮತ್ತು ಕೃಷಿ ತಜ್ಞರೊಂದಿಗೆ ಸಂವಾದ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ದೊರೆಯಲಿವೆ ಎಂದು ವಿವರಿಸಿದರು. ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಹೇಮ್ಲಾನಾಯಕ್‌, ಸಂಶೋಧನಾ ನಿರ್ದೇಶಕ ಡಾ. ಮೃತ್ಯುಂಜಯ ಸಿ.ವಾಲಿ, ಡೀನ್ ಡಾ. ಬಿ.ಎಂ.ದುಶ್ಯಂತಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!