ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸನ್ಮಾನ
ಶಿವಮೊಗ್ಗ | 3 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಮಾಜಿ ಮುಖ್ಯಮಂತ್ರಿ, ಅಭಿವೃದ್ಧಿ ಹರಿಕಾರ, ರೈತರ ಕಣ್ಮಣಿ, ಜನಪ್ರಿಯ ನಾಯಕ ಬಿ.ಎಸ್.ಮುಖ್ಯಮಂತ್ರಿ ಅವರಿಗೆ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕ್ಷಣ, ಆರೋಗ್ಯ, ಉದ್ಯಮ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ.
ಐದು ದಶಕಗಳಿಗೂ ಅಧಿಕ ರಾಜಕೀಯ ಜೀವನದಲ್ಲಿ ಅಧಿಕಾರ ವಹಿಸಿಕೊಂಡಿದ್ದು ಕೆಲವೇ ವರ್ಷಗಳೇ ಆದರೂ ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಉದ್ಯಮಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೂ ಉಪಯುಕ್ತವಾಗುವಂತಹ ಜನಪ್ರಿಯ ಯೋಜನೆಗಳ ಅನುಷ್ಠಾನಗೊಳಿಸಿದ್ದರು. ಪೂರ್ಣ ಅವಧಿ ಮುಖ್ಯಮಂತ್ರಿ ಆಗಿದ್ದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿ ನಂಬರ್ 1 ರಾಜ್ಯವಾಗಿ ರೂಪುಗೊಳ್ಳುತ್ತಿತ್ತು ಎಂದು ವಾಣಿಜ್ಯ ಸಂಘದ ಪದಾಧಿಕಾರಿಗಳು ಅನಿಸಿಕೆ ವ್ಯಕ್ತಪಡಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಸಂಘದ ವತಿಯಿಂದ ಶುಭಾಶಯ ಕೋರಿ ಅಭಿನಂದಿಸಿದರು.
ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಬಿ.ಆರ್.ಸಂತೋಷ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪ್ರದೀಪ್ ಎಲಿ, ಹಾಲಸ್ವಾಮಿ, ಗಣೇಶ್ ಅಂಗಡಿ, ಎಂ.ರಾಜ್, ಜೆ.ಆರ್.ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu