ಕ್ರಿಕೆಟ್ ಜೀವನದಲ್ಲಿ 75ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ, 28ನೇ ಟೆಸ್ಟ್ ಶತಕ, ಆಸ್ಟೇಲಿಯಾ ಭಾರತ ನಡುವಿನ ನಾಲ್ಕನೇ ಟೆಸ್ಟ್
ಕ್ರಿಕೆಟ್ | 12 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನದಲ್ಲಿ 75ನೇ ಶತಕ ಸಿಡಿಸಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ 28ನೇ ಶತಕ ದಾಖಲಿಸಿದ್ದಾರೆ. ಭಾರತ ತಂಡ ಉತ್ತಮವಾಗಿ ಇನ್ನಿಂಗ್ ಕಟ್ಟುತ್ತಿದ್ದು, 5 ವಿಕೆಟ್ ನಷ್ಟಕ್ಕೆ 400 ರನ್ ಗಳಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 289/3 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ ( 59 ) ಹಾಗೂ ರವೀಂದ್ರ ಜಡೇಜಾ ( 16 ) ರನ್‌ನಿಂದ ನಾಲ್ಕನೇ ದಿನದಾಟ ಆರಂಭಿಸಿದರು. ಜಡೇಜಾ 28 ರನ್ ಆಗಿದ್ದ ವೇಳೆ ಟಾಡ್ ಮರ್ಫಿ ಎಸೆತದಲ್ಲಿ ಔಟ್ ಆದರು. ನಂತರ ವಿಕೆಟ್ ಕೀಪರ್ ಶ್ರೀಕರ್ ಭರತ್ ಜತೆ ಕೊಹ್ಲಿ ಇನ್ನಿಂಗ್ ಜತೆಯಾಟ ನಡೆಸಿದರು. ಭರತ್ 44 ರನ್ ಗಳಿಸಿ ಔಟ್ ಆದರು.
ಭಾರತ ತಂಡ ಇದೀಗ 400/5 ರನ್ ಗಳಿಸಿದ್ದು, ಕೊಹ್ಲಿ ( 100 ) ಹಾಗೂ ಅಕ್ಸರ್ ಪಟೇಲ್ ( 5 ) ರನ್ ಗಳಿಸಿದ್ದಾರೆ. ಭಾರತ ಇನ್ನೂ 80 ರನ್‌ಗಳ ಹಿನ್ನಡೆಯಲ್ಲಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 480 ರನ್ ಗಳಿಸಿತ್ತು. ಭಾರತದ ಪರ ರೋಹಿತ್ ಶರ್ಮಾ 35, ಶುಭಮಾನ್ ಗಿಲ್ 128, ಚೇತೇಶ್ವರ ಪೂಜಾರ 42, ರವೀಂದ್ರ ಜಡೇಜಾ 28 ರನ್ ಗಳಿಸಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಭಾರತ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆಯಲ್ಲಿದ್ದು, ನಾಲ್ಕನೇ ಟೆಸ್ಟ್ ಪಂದ್ಯದ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ಸ್ಥಾನ ಖಚಿತಪಡಿಸಿಕೊಳ್ಳಲು ಹಾಗೂ ಐಸಿಸಿ ಟೆಸ್ಟ್ ಟಾಪ್ ತಂಡಗಳ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಅಲಂಕರಿಸಲು ಗೆಲುವು ಅಗತ್ಯವಿದೆ. ಸದ್ಯದ ಪ್ರಕಾರ ಟೆಸ್ಟ್ ಪಂದ್ಯ ಡ್ರಾ ಆಗುವ ಸಾಧ್ಯತೆ ಹೆಚ್ಚಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu