ರೈತರ ಮಕ್ಕಳಿಗೆ ತರಬೇತಿಗೆ ಅರ್ಜಿ ಆಹ್ವಾನ, ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಶಿವಮೊಗ್ಗ | 17 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿಗೆ ರೈತರ ಮಕ್ಕಳಿಗೆ 2023ರ ಮೇ 2 ರಿಂದ ರಿಂದ 2024ರ ಫೆಬ್ರವರಿ 29ರವರೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಉತ್ತೀರ್ಣ ಆಗಿರಬೇಕು. ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಆಸಕ್ತರು ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್ 12 ರೊಳಗೆ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿರುತ್ತಾರೆ. ಮಾಹಿತಿಗೆ ದೂರವಾಣಿ ಸಂಖ್ಯೆ 08182222794 ಅಥವಾ 9964512759 ಸಂಪರ್ಕಿಸಬಹುದಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu