ವೈದ್ಯಕೀಯ ತಂತ್ರ ವಿಧಾನಗಳ ದುರ್ಬಳಕೆ ಬೇಡ, ಗರ್ಭಪೂರ್ವ ಮತ್ತು ಪ್ರಸವಪೂರ್ವ, ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ 1994 ಜಿಲ್ಲಾ ಮಟ್ಟದ ಕಾರ್ಯಾಗಾರ
ಶಿವಮೊಗ್ಗ | 16 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಲಿಂಗಪತ್ತೆಗಾಗಿ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಮಾಡಿಸಬಾರದು ಮತ್ತು ಮಾಡಬಾರದು. ಆಧುನಿಕ ವೈದ್ಯಕೀಯ ತಂತ್ರವಿಧಾನಗಳ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಗರ್ಭಪೂರ್ವ ಮತ್ತು ಪ್ರಸವಪೂರ್ವ, ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ 1994 ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾನೂನುಗಳ ಸಮರ್ಪಕ ಪಾಲನೆ ಆಗಬೇಕು. ವೈದ್ಯಕೀಯ ಸೌಲಭ್ಯಗಳ ಸದ್ಬಳಕೆ ಆಗಬೇಕು. ಭ್ರೂಣ ಹತ್ಯೆಯಂತಹ ಪ್ರಕರಣಗಳು ಕಂಡುಬಂದರೆ ಪೊಲೀಸ್ ಅಥವಾ ಕಾನೂನು ಸೇವಾ ಪ್ರಾಧಿಕಾರಕ್ಕೆ ತಿಳಿಸಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಪಿಸಿಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ವೀಣಾ ಭಟ್ ಮಾತನಾಡಿದರು. ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ 24 ವೈದ್ಯರಿಗೆ ಬಿ.ಸಿ.ರಾಯ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್, ಶಸ್ತ್ರಚಿಕಿತ್ಸಕ ಡಾ. ಸಿದ್ದನಗೌಡ ಪಾಟೀಲ್, ಐಎಂಎ ಅಧ್ಯಕ್ಷ ಡಾ. ಅರುಣ್ ಎಂ.ಎಸ್, ಡಾ. ಶಿವಾನಂದ, ವೆಂಕಟೇಶ್ ರಾವ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu