ಶ್ರದ್ಧೆ, ಏಕಾಗ್ರತೆಯಿಂದ ಅಧ್ಯಯನ ನಡೆಸುವುದು ಅವಶ್ಯಕ
ಶಿವಮೊಗ್ಗ | 1 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ವಿದ್ಯಾರ್ಥಿಗಳು ಪರೀಕ್ಷೆ ಎಂದರೆ ಭಯಪಡುವ ಅಗತ್ಯವಿಲ್ಲ. ಸರಿಯಾದ ಅಧ್ಯಯನ ಕ್ರಮ ಅನುಸರಿಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು ಎಂದು ಜೆಸಿ ಅಂತರಾಷ್ಟ್ರೀಯ ತರಬೇತುದಾರ ಪ್ರಜ್ವಲ್ ಜೈನ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರಾಜೇಂದ್ರನಗರದ ರೋಟರಿ ಶಾಲೆಯ ರೋಟರಿ ಸಭಾಂಗಣದಲ್ಲಿ ಪ್ರೌಢಶಾಲೆಯ ಮಕ್ಕಳಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಪರೀಕ್ಷೆ ಹಬ್ಬ, ಪರೀಕ್ಷೆ ಎಂದರೆ ಭಯ ಬೇಡ” ವಿಷಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಉತ್ತಮ ಆಹಾರ ತೆಗೆದುಕೊಳ್ಳುವ ಜತೆಯಲ್ಲಿ ಸರಿಯಾದ ದಿನನಿತ್ಯದ ಕಲಿಕಾ ಕ್ರಮವನ್ನು ಪಾಲಿಸಬೇಕು. ಶ್ರದ್ಧೆ, ಏಕಾಗ್ರತೆಯಿಂದ ಅಧ್ಯಯನ ನಡೆಸಬೇಕು. ಕಲಿಕಾ ಸಾಮಾರ್ಥ್ಯ ವೃದ್ಧಿಯಾಗುವ ಜತೆಯಲ್ಲಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಇಂತಹ ಶಿಬಿರಗಳನ್ನು ಹೆಚ್ಚು ಹೆಚ್ಚು ಶುಲ್ಕ ಪಡೆದು ನೀಡಲಾಗುತ್ತಿದೆ. ಆದರೆ ಜೆಸಿ ಸಹ್ಯಾದ್ರಿ ಸಂಸ್ಥೆ ವತಿಯಿಂದ ಅನೇಕ ಶಾಲೆಗಳಲ್ಲಿ ಉಚಿತವಾಗಿ ತರಬೇತಿ ಶಿಬಿರ ನಡೆಸುತ್ತಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜೆಸಿಐ ಸಹ್ಯಾದ್ರಿ ಶಿವಮೊಗ್ಗ ಅಧ್ಯಕ್ಷೆ ಸುಷ್ಮಾ ಹಿರೇಮಠ್ ಮಾತನಾಡಿ, ಪರೀಕ್ಷೆ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಇಂತಹ ಶಿಬಿರಗಳ ಸೌಲಭ್ಯ ಒದಗಿಸುವುದರಿಂದ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ಮಾರ್ಗದರ್ಶನ ಸಿಗುತ್ತದೆ. ಪರೀಕ್ಷಾ ಭಯ ಹೋಗಿಸಲು ಸಾಧ್ಯವಾಗುತ್ತದೆ. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಧನಾತ್ಮಕ ಆಲೋಚನೆಯೊಂದಿಗೆ ಮುನ್ನಡೆಯಬೇಕು. ಯಶಸ್ಸು ಗಳಿಸಲು ಸಹಕಾರಿ ಆಗುತ್ತದೆ ಎಂದು ತಿಳಿಸಿದರು.
ಜೆಸಿಐ ಸಹ್ಯಾದ್ರಿ ಶಿವಮೊಗ್ಗ ಉಪಾಧ್ಯಕ್ಷ ಬಿ.ಎನ್.ಸಂತೋಷ್‌ಕುಮಾರ್, ವಲಯ ಉಪಾಧ್ಯಕ್ಷ ಸತೀಶ್‌ಚಂದ್ರ, ಸಹ ಕಾರ್ಯದರ್ಶಿ ಜಿ.ವಿ.ಗಣೇಶ್, ಮುಖ್ಯಶಿಕ್ಷಕ ಸೂರ್ಯನಾರಾಯಣ್, ಜಯಶೀಲಬಾಯಿ, ಜಿ.ವಿಜಯ್‌ಕುಮಾರ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu